ಶೀಘ್ರವೇ ಗ್ರಾಮೀಣ ಪತ್ರಕರ್ತರ ಬಸ್ ಪಾಸ್ ಜಾರಿ

VK NEWS
By -
0

ವಾರ್ತಾ ಇಲಾಖೆ ಆಯುಕ್ತರಾದ ನಿಂಬಾಳ್ಕರ್ ಭರವಸೆ

ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು:ಹೊಸ ವರ್ಷದಲ್ಲಿ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡಲಾಗುವುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ತಿಳಿಸಿದ್ದಾರೆ.

ಬಸ್ ಪಾಸ್ ಜಾರಿ ಸಂಬಂದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮನವಿ ಹಿನ್ನೆಲೆಯಲ್ಲಿ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ಮಾಹಿತಿ ನೀಡಿರುವ ಅವರು, ಶೀಘ್ರವೇ ಮುಖ್ಯಮಂತ್ರಿಗಳಿಂದ ಯೋಜನೆಗೆ ಚಾಲನೆ ಕೊಡಿಸಲಾಗುವುದು ಎಂದಿದ್ದಾರೆ.

ಗ್ರಾಮೀಣ ಬಸ್ ಪಾಸ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ೋಷಣೆ ಮಾಡಿದ್ದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಸತತ ಸಭೆಗಳು ಆಗಿದ್ದು, ತಾಲೂಕು ಮಟ್ಟದಲ್ಲಿರುವ ಪತ್ರಕರ್ತರಿಗೂ ಈ ಯೋಜನೆ ತಲುಪಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.

ಬಸ್ ಪಾಸ್‌ಗಾಗಿಯೇ ಸಾಪ್ಟ್ ವೇರ್ ಅಭಿವೃದ್ಧಿಪಡಿಸಲಾಗಿದೆ. ಸೇವಾ ಸಿಂಧುವಿನಲ್ಲಿ ನಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಮೂಲವೇ ಅರ್ಜಿ ಸಲ್ಲಿಸುವ ವ್ಯವಸ್ಥೆ ಮಾಡಲಾಗುತ್ತಿದೆ.  ಪತ್ರಕರ್ತರು ವಾರ್ತಾ ಇಲಾಖೆಗೆ ಅರ್ಜಿ ಸಲ್ಲಿಸಬೇಕಿಲ್ಲ ಎಂದರು.

ಬಸ್ ಪಾಸ್‌ಗಾಗಿಯೇ ರಾಜ್ಯ ಮಟ್ಟದಲ್ಲಿ ಸಮಿತಿಯೊಂದನ್ನು ರಚನೆ ಮಾಡಲಾಗಿದೆ. ಆಯಾ ಜಿಲ್ಲಾ ಮಟ್ಟದಲ್ಲಿ ಉಚಿತವಾಗಿ ಪ್ರವಾಸ ಮಾಡಲು ಬಸ್ ಪಾಸ್‌ನ್ನು ಜಿಲ್ಲಾ ಮಟ್ಟದಲ್ಲಿಯೇ ಪಡೆದುಕೊಳ್ಳುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

ಕೆಲ ಕಠಿಣ ನಿಯಮಾವಳಿ ಸರಳೀಕರಣ ಮಾಡಬೇಕು ಎಂದು ಕೆಯುಡಬ್ಲೂೃಜೆ ಸಲ್ಲಿಸಿರುವ ಮನವಿಯನ್ನು ಪರಿಶೀಲನೆ ಮಾಡಿ ಸೂಕ್ತ ಕ್ರಮ ವಹಿಸಲಾಗುವುದು ಎಂದು ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಹೇಳಿದ್ದಾರೆ.

Post a Comment

0Comments

Post a Comment (0)