ಬೆಂಗಳೂರು: ಇತ್ತೀಚಿಗೆ ನವದೆಹಲಿಯಲ್ಲಿ ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯಿಂದ ನಡೆದ 40 ನೇ ರಾಷ್ಟ್ರೀಯ ಸಮಾವೇಶದಲ್ಲಿ ಸಮಾಜ ಸೇವೆ ಮತ್ತು ಸರ್ಕಾರದ ಸೇವೆಯೊಂದಿಗೆ ಸಾಮಾಜಿಕ ಸಮಸ್ಯೆಗಳ ಬಗ್ಗೆ ರಾಷ್ಟ್ರಮಟ್ಟದಲ್ಲಿ ಜಾಗೃತಿ ಮ್ಯಾರಥಾನ್ ನಡೆಯಿಸಿರುವುದನ್ನು ಮತ್ತು ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಬಳ್ಳಾರಿ ಜಿಲ್ಲೆಯ ಕಂಪ್ಲಿ ನಿವಾಸಿ ಕರ್ನಾಟಕ ರಾಜ್ಯ ಪೊಲೀಸ್ ದೂರುಗಳ ಪ್ರಾಧಿಕಾರದ ಸದಸ್ಯರಾದ ಮೋಹನ್ ಕುಮಾರ್ ದಾನಪ್ಪನವರಿಗೆ 2024ನೇ ಸಾಲಿನ "ಡಾ.ಅಂಬೇಡ್ಕರ್ ವಿಶಿಷ್ಟ ಸೇವಾ ರಾಷ್ಟ್ರೀಯ ಪ್ರಶಸ್ತಿ" ಯನ್ನು ಭಾರತೀಯ ದಲಿತ ಸಾಹಿತ್ಯ ಅಕಾಡೆಮಿಯ ರಾಷ್ಟ್ರಾಧ್ಯಕ್ಷ ಡಾ. ಎಸ್.ಪಿ.ಸುಮನಾಕ್ಟರ್ ಹಾಗೂ ಕೇಂದ್ರ ಸರ್ಕಾರದ ಸಹಕಾರ ಅಭಿವೃದ್ದಿ ನಿಗಮದ ಮಹಾ ನಿರ್ದೇಶಕರಾದ ಮನೋಜ್ ಕುಮಾರ್ ರವರು ಪ್ರಶಸ್ತಿ ಪ್ರಧಾನ ಮಾಡಿದರು.
ಮೋಹನ್ ಕುಮಾರ್ ದಾನಪ್ಪಗೆ ಅಂಬೇಡ್ಕರ್ ವಿಶಿಷ್ಟ ಸೇವಾ ರಾಷ್ಟ್ರ ಪ್ರಶಸ್ತಿ ಪ್ರಧಾನ
By -
December 17, 2024
0