ಐತಿಹಾಸಿಕ ಬೆಂಗಳೂರು ಕರಗ (BENGALURU KARAGA) ಉತ್ಸವ ನಾಳೆಯಿಂದ

VK NEWS
By -
0

ಬೆಂಗಳೂರು: ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಉತ್ಸವ ನಾಳೆಯಿಂದ ಜರುಗಲಿದೆ. ಧರ್ಮರಾಯ ದೇವಸ್ಥಾನದಲ್ಲಿ ಏ.14ರ ವರೆಗೂ ಕರಗ ಉತ್ಸವ ನಡೆಯಲಿದೆ. 


ನಾಳೆ ರಾತ್ರಿ 10 ಗಂಟೆಗೆ ಕರಗ ಆಚರಣೆಗಳು ಶುರುವಾಗಲಿವೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಈ ಬಾರಿ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. 

ಕಳೆದ 14 ವರ್ಷಗಳಿಂದ ಜ್ಞಾನೇಂದ್ರ ಕರಗ (karaga - Jnanendra) ಹೊರುತ್ತಿದ್ದಾರೆ. ಈ ಬಾರಿ ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆ ಇದೆ. ಏಪ್ರಿಲ್ 4 ರಂದು ರಥೋತ್ಸವ ಮತ್ತು ಧ್ವಜಾರೋಹಣ ನಡೆಯಲಿದೆ. ಏ.5 ರಿಂದ ಏ.8 ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ಇರಲಿದೆ. ಏ.9 ರಂದು ಆರತಿ ದೀಪಗಳು, ಏ.10 ರ ಗುರುವಾರ ಹಸಿ ಕರಗ, ಏ.11 ರಂದು ಹೊಂಗಲು ಸೇವೆ, ಏ.12 ಶನಿವಾರದಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯಸ್ವಾಮಿ ರಥೋತ್ಸವ, ಏ.13 ರಂದು ಪುರಾಣ ಪ್ರವಚನ ಮತ್ತು ದೇವಸ್ಥಾನದಲ್ಲಿ ಗಾವು ಶಾಂತಿ, ಏ.14 ರ ಸೋಮವಾರ ವಸಂತೋತ್ಸವ ಧ್ವಜಾರೋಹಣ ಇರಲಿದೆ.

ಈ ಹಿನ್ನೆಲೆಯಲ್ಲಿ (Dharmaraya Temple) ಧರ್ಮರಾಯ ದೇವಸ್ಥಾನದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಂದು ಬೆಳಗ್ಗೆಯಿಂದಲೇ ದೇವಾಲಯದ ಸ್ವಚ್ಛತಾ ಕಾರ್ಯ ನಡೆದಿದೆ. ಸಿಬ್ಬಂದಿಯು ದೇವಾಲಯ, ರಥ ಸೇರಿದಂತೆ ಸಂಪೂರ್ಣ ಶುಚಿಗೊಳಿಸುತ್ತಿದ್ದಾರೆ. ಕರಗ ಆಚರಣೆಗಳು ನಾಳೆ ರಾತ್ರಿ 10 ಗಂಟೆಗೆ ಶುರುವಾಗಲಿವೆ. 

Tags:

Post a Comment

0Comments

Post a Comment (0)