ಬೆಂಗಳೂರು: ರಾಜ್ಯದಲ್ಲಿ ತೀವ್ರ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿಯ ಅಹೋರಾತ್ರಿ ಧರಣಿಯ ಬಳಿಕ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಗೆ ಮುತ್ತಿಗೆ ಹಾಕಲು ಕರೆ ನೀಡಿದರು.
ಈ ಕರೆಯಂತೆ ಸಿಎಂ ಮನೆಗೆ ಮುತ್ತಿಗೆ ಹಾಕಲು ಹೊರಟಿದ್ದ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಬೈರತಿ ಬಸವರಾಜ್, ಪ್ರಮುಖರಾದ ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್ ಮೊದಲಾದವರಲ್ಲದೆ, ನೂರಾರು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಇದಕ್ಕೂ ಮೊದಲು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ವಿಜಯೇಂದ್ರ ಅವರು ಬಿಜೆಪಿ ಹೋರಾಟ ಮುಂದುವರೆಯಲಿದೆ; ಇದೇ 7ರಿಂದ ಜನಾಕ್ರೋಶ ರ್ಯಾಲಿ ನಡೆಸಲಿದ್ದೇವೆ ಎಂದು ತಿಳಿಸಿದರು.