ದರ್ಶನ್ ಮಹತ್ವದ ಭವಿಷ್ಯ ಇಂದು….!

VK NEWS
By -
0

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಅವರ ಜಾಮೀನು ಕುರಿತು ಇಂದು ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಕೈಗೊಳ್ಳಲಿದೆ. ಪ್ರಕರಣದಲ್ಲಿ ದರ್ಶನ್ ಸೇರಿದಂತೆ ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿದ್ದು, ಪವಿತ್ರಾ ಗೌಡ ಮುಖ್ಯ ಆರೋಪಿಯಾಗಿದ್ದಾರೆ. ದರ್ಶನ್ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ.ದರ್ಶನ್ ಸೇರಿದಂತೆ 7 ಆರೋಪಿಗಳಿಗೆ ಜಾಮೀನು ರದ್ದತಿಗೆ ರಾಜ್ಯ ಸರ್ಕಾರ ಕೋರಿದೆ. ಇಂದು ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಮೂರ್ತಿ ಪರ್ದೀವಾಲ ಮತ್ತು ನ್ಯಾಯಮೂರ್ತಿ ಮಹದೇವನ್‌‌ ಪೀಠದ ಮುಂದೆ ಅರ್ಜಿಯ ವಿಚಾರಣೆ ನಡೆಯಲಿದೆ.


ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ದರ್ಶನ್ ಮತ್ತು ಇತರ ಆರೋಪಿಗಳ ಜಾಮೀನು ರದ್ದುಗೊಳಿಸುವಂತೆ ಕೋರಿದೆ. ಪ್ರಾಸಿಕ್ಯೂಷನ್ ಪ್ರಕಾರ, ಹೈಕೋರ್ಟ್ ಆದೇಶ ಅವಸರದಲ್ಲಿ ಕೈಗೊಂಡಿದ್ದು, ದರ್ಶನ್ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ ಎಂದು ವಾದಿಸಲಾಗಿದೆ.

 ಪ್ರಕರಣದಲ್ಲಿ ಪ್ರಬಲ ಸಾಕ್ಷ್ಯಗಳಿದ್ದರೂ ಹೈಕೋರ್ಟ್ ಅವುಗಳನ್ನು ಸರಿಯಾಗಿ ಪರಿಗಣಿಸಿಲ್ಲ ಎಂದು ಆರೋಪಿಸಲಾಗಿದೆ. ಸೆಷನ್ಸ್ ಕೋರ್ಟ್ನಲ್ಲಿ ಕೇಸ್ ಚಾರ್ಜ್ ಫ್ರೇಮ್ ಇನ್ನೂ ಹಂತಕ್ಕೆ ಬಂದಿಲ್ಲ. ನಟ ದರ್ಶನ್ಗೆ 6 ವಾರಗಳು ಮಧ್ಯಂತರ ಬೇಲ್ ನೀಡಿದ್ದಾಗಲೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ. ನಟ ದರ್ಶನ್ಮತ್ತು ಗ್ಯಾಂಗ್ ಹೈಕೋರ್ಟ್ಜಾಮೀನಿಗೆ ಅರ್ಹರಾಗಿಲ್ಲ. ಕೇಸ್​​ನಲ್ಲಿ ಪ್ರಬಲ ಸಾಕ್ಷಿಗಳಿದ್ದರೂ ಪರಿಗಣಿಸಲು ಕೋರ್ಟ್​​​​ ವಿಫಲವಾಗಿದೆ. ಹೀಗಾಗಿ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡುವಂತೆ ವಕೀಲರು ಸುಪ್ರೀಂ ಕೋರ್ಟ್ಗೆ ಮನವಿ ಮಾಡಲಿದ್ದಾರೆ. ಕೇಸ್ನಲ್ಲಿ ಟೆಕ್ನಿಕಲ್ ಹಾಗೂ ಸಾಂದರ್ಭಿಕ ಸಾಕ್ಷ್ಯಗಳನ್ನು ಪರಿಗಣಿಸಲು ಹೈಕೋರ್ಟ್ವಿಫಲವಾಗಿದೆ. ಹೀಗಾಗಿ ಮಧ್ಯಂತರ ಪರಿಹಾರವಾಗಿ ಏಕಪಕ್ಷೀಯ ಆದೇಶ ನೀಡಬೇಕು ಅಂತ ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಅರ್ಜಿಯಲ್ಲಿ ಕೋರಲಾಗಿದೆ. ಒಂದು ವೇಳೆ ಸುಪ್ರೀಂಕೋರ್ಟ್ ಜಾಮೀನು ರದ್ದು ಮಾಡಿದ್ರೆ ಮತ್ತೆ ನಟ ದರ್ಶನ್ ಅಂಡ್ ಗ್ಯಾಂಗ್ಗೆ ಸಂಕಷ್ಟ ಎದುರಾಗಲಿದೆ.

Post a Comment

0Comments

Post a Comment (0)