ಹುಬ್ಬಳ್ಳಿಯಲ್ಲಿ ಪ್ರಚೋನದಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಅಕ್ರಮ ಚಿನ್ನ ಸಾಗಾಟದಲ್ಲಿ ಸಿಕ್ಕಿಬಿದ್ದು ನಟಿ ರನ್ಯಾ ರಾವ್ ಜೈಲು ಪಾಲಾಗಿದ್ದು, ಡಿಐಆರ್, ಸಿಬಿಐ ಹಾಗೈ ಇಡಿ ತನಿಖೆ ತೀವ್ರಗೊಳಿಸಿದ್ದು, ಚಿನ್ನದ ಜಾಲ ಬಗೆದಷ್ಟು ಬಯಲಾಗುತ್ತಿದೆ. ಇನ್ನು ಈ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಹಿಂದೆ ಕರ್ನಾಟಕ ಸಚಿವರು ಇದ್ದಾರೆ ಎನ್ನುವ ಮಾತುಗಳು ಕೇಳಿಬಂದಿದೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರನ್ಯಾ ರಾವ್ ತಂಟೆಗೆ ಕೇಸ್ ಹಾಕಿಸಿಕೊಂಡಿದ್ದಾರೆ. ಹೌದು… ಸ್ಯಾಂಡಲ್‌ವುಡ್ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಆರೋಪದ ಮೇಲೆ ಯತ್ನಾಳ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಏ. 7ರಂದು ಹುಬ್ಬಳ್ಳಿ ನಗರದಲ್ಲಿ ನಡೆದಿದ್ದ ಶ್ರೀರಾಮನವಮಿ ಕಾರ್ಯಕ್ರಮದಲ್ಲಿ ಬಿಜಾಪುರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಶಾಂತಿ ಸೌಹಾರ್ದತೆ ಕದಡುವುದರ ಜೊತೆಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಭಾಷಣ ಮಾಡಿದ್ದಾರೆ ಎಂದು ಮೊಹಮ್ಮದ್ ಹನ್ನಾರ್ ಎಂಬುವವರು ವಿಜಯಪುರದ ಗೋಲ್ ಗುಂಬಜ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಈಕೆ ಚಿನ್ನ ಸಾಗಾಟದಿಂದಾಗಿ ಮಲತಂದೆಗೂ ಸಂಕಷ್ಟ ಎದುರಾಗಿದೆ. ಮತ್ತೊಂದೆಡೆ ರನ್ಯಾ ತಂಟೆಗೆ ಹೋದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಯತ್ನಾಳ್ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ರನ್ಯಾ ರಾವ್ ಪರ ಅಕುಲ ಅನುರಾಧ ಎಂಬವರು ಆರೋಪಿಸಿ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಈಗ ಯತ್ನಾಳ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 79 ಅಡಿಯಲ್ಲಿ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.“ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ ಅದನ್ನು ಬಚ್ಚಿಟ್ಟಿದ್ದಳು” ಎಂದು ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಸಂಬಂಧ ರನ್ಯಾ ಪರವಾಗಿ ಅಕುಲ ಅನುರಾಧ ಅವರು ದೂರು ನೀಡಿದ್ದಾರೆ.