Live Stream

[ytplayer id=’22727′]

| Latest Version 8.0.1 |

National NewsWorld News

ಅಪಾಯಕಾರಿ ಹಂತಕ್ಕೆ ತಲುಪಿದ ಇರಾನ್ – ಇಸ್ರೇಲ್ ನಡುವಿನ ಯುದ್ಧ

ಅಪಾಯಕಾರಿ ಹಂತಕ್ಕೆ ತಲುಪಿದ ಇರಾನ್ – ಇಸ್ರೇಲ್ ನಡುವಿನ ಯುದ್ಧ

ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧಕ್ಕೆ ಅಮೆರಿಕ ಎಂಟ್ರಿಯಾಗಿದ್ದು ಅಪಾಯಕಾರಿ ಹಂತಕ್ಕೆ ತಲುಪಿದೆ. ಇಸ್ರೇಲ್‌ ಬೆಂಬಲಕ್ಕೆ ನಿಂತಿರುವ ಟ್ರಂಪ್‌ ಶರಣಾಗುವಂತೆ ಧಮ್ಕಿ ಹಾಕಿದ್ದಾರೆ. ಆದ್ರೆ ಅಮೆರಿಕ ಬೆದರಿಕೆಗೂ ಜಗ್ಗದ ಇರಾನ್‌ನ ಸರ್ವೋಚ್ಛ ನಾಯಕ (Iran’s Supreme Leader Ali Khamenei) ʻಯುದ್ಧ ಶುರುವಾಗಿದೆʼ ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಳ್ಳುವ ಮೂಲಕ ತಿರುಗೇಟು ನೀಡಿದ್ದಾರೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ನಮಿ ಹೆಸರಿನಲ್ಲಿ, ಯುದ್ಧ ಪ್ರಾರಂಭವಾಗುತ್ತದೆ. ಅಲಿ ತನ್ನ ಜುಲ್ಫಿಕರ್‌ನೊಂದಿಗೆ ಖಮೇನಿಗೆ ಹಿಂತಿರುಗುತ್ತಾನೆ. ಹೈದರ್‌ ಹೆಸರಿನಲ್ಲಿ ಯುದ್ಧ ಶುರುವಾಗುತ್ತೆ, ಜಿಯೋನಿಸ್ಟ್‌ (ಯಹೂದಿಗಳು) ಗಳಿಗೆ ಯಾವುದೇ ಕರುಣೆ ತೋರಲ್ಲ.  ಎಂದು ಅಯತೊಲ್ಲಾ ಅಲಿ ಖಮೇನಿ ಅವರ ಅನುವಾದ ಪೋಸ್ಟ್‌ ಸೂಚಿಸಿದೆ.

ಇರಾನ್‌ನ ಸರ್ವೋಚ್ಚ ನಾಯಕ ಅಲಿ ಖಮೇನಿಯನ್ನು ಸದ್ಯಕ್ಕೆ ನಾವು ಹತ್ಯೆ ಮಾಡುವುದಿಲ್ಲ. ಬದಲಾಗಿ ಅಲಿ ಖಮೇನಿ ಶರಣಾಗಬೇಕು ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ನೇರವಾಗಿ ಎಚ್ಚರಿಕೆ ನೀಡಿದ ಬೆನ್ನಲ್ಲೇ ಖಮೇನಿ ಅವರ ಈ ಪೋಸ್ಟ್‌ ಬಂದಿದೆ.

ಟ್ರಂಪ್‌ ಹೇಳಿದ್ದೇನು? ಸುಪ್ರೀಂ ಲೀಡರ್ ಎಂದು ಕರೆಯಲ್ಪಡುವ ವ್ಯಕ್ತಿ ಅಡಗಿದ್ದಾನೆ ಎನ್ನುವುದು ನಮಗೆ ನಿಖರವಾಗಿ ತಿಳಿದಿದೆ. ಅವನನ್ನು ನಾವು ಹತ್ಯೆ ಮಾಡಲು ಹೋಗುವುದಿಲ್ಲ. ನಾಗರಿಕರು ಅಥವಾ ಅಮೇರಿಕನ್ ಸೈನಿಕರ ಮೇಲೆ ಕ್ಷಿಪಣಿಗಳು ಹಾರಿಸುವುದನ್ನು ನಾವು ಬಯಸುವುದಿಲ್ಲ. ನಮ್ಮ ಸಹನೆಯನ್ನು ಪರೀಕ್ಷೆ ಮಾಡುವುದು ಬೇಡ. ನಾವು ಈಗ ಇರಾನ್ ಆಕಾಶದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದೇವೆ. ಇರಾನ್ ಉತ್ತಮ ಸ್ಕೈ ಟ್ರ್ಯಾಕರ್‌ಗಳು ಮತ್ತು ಇತರ ರಕ್ಷಣಾ ಸಾಧನಗಳನ್ನು ಹೊಂದಿತ್ತು. ಆದರೆ ಅಮೇರಿಕ ನಿರ್ಮಿತ ಸಾಮಾಗ್ರಿಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅಮೆರಿಕ ತಯಾರಿಸಿದಂತೆ ಯಾರೂ ಉತ್ತಮವಾಗಿ ತಯಾರಿಸಲು ಸಾಧ್ಯವಿಲ್ಲ ಎಂದು ಪೋಸ್ಟ್‌ನಲ್ಲಿ ಹೇಳಿದ್ದರು.

ವೀ ಕೇ ನ್ಯೂಸ್
";