Live Stream

[ytplayer id=’22727′]

| Latest Version 8.0.1 |

State News

ಸ್ವಯಂ ನಿವೃತ್ತಿಯಿಂದ ಹಿಂದೆ ಸರಿದ್ರಾ ಎಎಸ್‍ಪಿ ನಾರಾಯಣ ಭರಮನಿ-ಸದ್ಯದ ನಿರ್ಧಾರವೇನು?
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ವೇದಿಕೆ ಮೇಲೆಯೇ ಹೊಡೆಯಲು ಕೈಎತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಇದೀಗ ತಮ್ಮ ಮಹತ್ವದ ನಿರ್ಧಾರವನ್ನು ಬಹಿರಂಗ ಪಡಿಸಿದ್ದಾರೆ,
ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯ ಹೆಚ್ಚುವರಿ ಎಸ್ಪಿ ಆಗಿದ್ದ ನಾರಾಯಣ ಭರಮನಿ ಅವರಿಗೆ ಕಪಾಳಮೋಕ್ಷಕ್ಕೆ ಮುಂದಾಗಿದ್ದರು, ಈ ಘಟನೆಯಿಂದ ಮನನೊಂದಿದ್ದ ನಾರಾಯಣ ಭರಮನಿ ಸ್ವಯಂ ನಿವೃತ್ತಿಗೆ ಮುಂದಾಗಿ ಪತ್ರ ಬರೆದಿದ್ದರು, ಆದರೆ ಈ ವರೆಗೂ ಅವರ ಸ್ವಯಂ ನಿವೃತ್ತಿ ಅರ್ಜಿ ಅಂಗೀಕಾರ ಆಗಿಲ್ಲ,
ಈ ಹಿನ್ನೆಲೆಯಲ್ಲಿ ಮಾತನಾಡಿದ ನಾರಾಯಣ ಭರಮನಿ ಅವರು ನಾನು ಶಿಸ್ತಿನ ಇಲಾಖೆಯಲ್ಲಿ ಇದ್ದೇನೆ, ನನ್ನ ಭಾವನೆಗಳನ್ನು ಇಲಾಖೆ ಮೇಲಾಧಿಕಾರಿಗಳಿಗೆ ತಿಳಿಸಿದ್ದೇನೆ, ಮೇಲಾಧಿಕಾರಿಗಳು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಸಚಿವ ಪರಮೇಶ್ವರ್ ಅವರು ನನ್ನ ಜೊತೆಗೆ ಮಾತನಾಡಿದ್ದಾರೆ, ಈಗ ನಾನು ಕೆಲಸಕ್ಕೆ ಹಾಜರಾಗುತ್ತಿದ್ದೇನೆ, ರಾಜೀನಾಮೆ ಅಂಗೀಕಾರದ ಕುರಿತು ಸರ್ಕಾರ ನಿರ್ಧರಿಸುತ್ತದೆ, ನಾನೀಗ ದೈನಂದಿನ ಕೆಲಸಕ್ಕೆ ಹಾಜರಾಗುತ್ತೇನೆ ಎಂದು ತಿಳಿಸಿದ್ದಾರೆ

ವೀ ಕೇ ನ್ಯೂಸ್
";