ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಕೋಚ್ ಗೌತಮ್ ಗಂಭೀರ್ ಅವರ ಕೋಚಿಂಗ್ ಶೈಲಿಯನ್ನು ಮಾಜಿ ಕ್ರಿಕೆಟಿಗರು ಸೇರಿದಂತೆ ಸುನಿಲ್ ಗವಾಸ್ಕರ್, ರಿಕಿ ಪಾಂಟಿಂಗ್ ಸೇರಿದಂತೆ ಹಲವು ಹಿರಿಯರು ಭಾರೀ ಟೀಕೆ ಮಾಡಿದ್ದಾರೆ. ಈ ಟೀಕೆಗಳಿಗೆ ಸಂಬಂಧಿಸಿ, ಗಂಭೀರ್ ಮನವಿ ಮಾಡಿಕೊಂಡ ಸಹಾಯಕ ಕೋಚ್‌ಗಳಾದ ಮಾರ್ನೆ ಮಾರ್ಕೆಲ್ (ಬೌಲಿಂಗ್ ಕೋಚ್) ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಶೀಘ್ರದಲ್ಲೇ ತಮ್ಮ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಮಾಧ್ಯಮ ವರದಿಗಳು ಸೂಚಿಸುತ್ತಿವೆ.
ಕಳೆದ ವರ್ಷ ಜುಲೈನಲ್ಲಿ ಗಂಭೀರ್ ಭಾರತದ ಕೋಚ್ ಆಗಿ ನೇಮಕಗೊಂಡಿದ್ದರು. ಅವರ ಮನವಿ ಮೇರೆಗೆ ಐಪಿಎಲ್ ತಂಡಗಳಲ್ಲಿ ಕಾರ್ಯನಿರ್ವಹಿಸಿದ್ದ ಅಭಿಷೇಕ್ ನಾಯರ್, ಮಾರ್ಕೆಲ್ ಮತ್ತು ಡೊಶ್ಕಾಟೆ ಸಹಾಯಕ ಕೋಚ್ ಆಗಿ ನೇಮಕಗೊಂಡಿದ್ದರು. ಆದರೆ, ನ್ಯೂಜಿಲೆಂಡ್ ವಿರುದ್ಧ ವೈಟ್ ವಾಷ್ ಹಾಗೂ ಆಸ್ಟ್ರೇಲಿಯಾ ತಂಡದ ಸೋಲುಗಳು ಬಿಸಿಸಿಐನಲ್ಲಿ ಅಸಮಾಧಾನ ಮೂಡಿಸಿದ ಕಾರಣ, ಮೊದಲನೆಯದಾಗಿ ಸಹಾಯಕ ಕೋಚ್ ಅಭಿಷೇಕ್ ನಾಯರ್ ಹುದ್ದೆಯಿಂದ ವಜಾಗೊಂಡಿದ್ದರು.
ಇದೇ ಹಿನ್ನೆಲೆಯಲ್ಲಿ, ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಮತ್ತು ರ್ಯಾನ್ ಟೆನ್ ಡೊಶ್ಕಾಟೆ ಸಹ ಇನ್ನೂ ಸಹ ಹುದ್ದೆಯಿಂದ ವಜಾಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಂಡದ ಆಯ್ಕೆ ಪ್ರಕ್ರಿಯೆ, ಆಟಗಾರರ ಕಾರ್ಯದೊತ್ತಡ, ಪಿಚ್ ಅನ್ವಯ 11 ಆಟಗಾರರ ಆಯ್ಕೆ ಮತ್ತು ಸಮತೋಲನ ಕಾಯ್ದುಕೊಳ್ಳುವ ವಿಚಾರದಲ್ಲಿ ಕೋಚ್‌ಗಳ ಕಾರ್ಯವೈಖರಿಗೆ ಬಿಸಿಸಿಐ ಅತೃಪ್ತಿ ವ್ಯಕ್ತಪಡಿಸಿದೆ.
ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಸ್ಥಾನಕ್ಕೂ ಸವಾಲು ಎದುರಾಗಿದೆ. 2023ರ ಜುಲೈನಲ್ಲಿ ನೇಮಕಗೊಂಡ ಈ ಸಮಿತಿ ಮುಖ್ಯಸ್ಥರ ನೇತೃತ್ವದಲ್ಲಿ ಭಾರತ ತಂಡದ ಪ್ರದರ್ಶನ ಕಳೆದ ಒಂದು ವರ್ಷದಿಂದ ತೀರಾ ಕಳಪೆಯಾಗಿದ್ದು, ಸಮರ್ಥ ಆಟಗಾರರ ಆಯ್ಕೆಯಲ್ಲಿ ನಿರಂತರ ಎಡವಾಟಗಳು ನಡೆದಿವೆ ಎಂದು ವಿಶ್ಲೇಷಣೆಗಳು ತಿಳಿಸುತ್ತಿವೆ.