ಕೇಂದ್ರ ಸರ್ಕಾರವು ದೇಶದ ಹಿರಿಯ ನಾಗರಿಕರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಒಂದು ದೊಡ್ಡ ಉಡುಗೊರೆಯನ್ನು ಘೋಷಿಸಿದೆ. 70 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಇನ್ಮುಂದೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ವಿಮೆ ಲಭ್ಯವಾಗಲಿದೆ. ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಈ ಯೋಜನೆ ಜಾರಿಗೆ ಬರಲಿದೆ.
ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಹೊಸ ಬದಲಾವಣೆಯನ್ನು ತರಲಾಗಿದೆ. ಈ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರಿಗೆ 5 ಲಕ್ಷ ರೂಪಾಯಿಗಳವರೆಗೆ ಉಚಿತ ಆರೋಗ್ಯ ಸೇವೆ ಒದಗಿಸಲಾಗುವುದು.
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಈ ಕುರಿತು ಮಾತನಾಡಿ, “ಆಯುಷ್ಮಾನ್ ಭಾರತ್ ಯೋಜನೆಯಿಂದ ಈಗಾಗಲೇ ದೇಶಾದ್ಯಂತ 4.5 ಕೋಟಿ ಕುಟುಂಬಗಳು ಪ್ರಯೋಜನ ಪಡೆದುಕೊಳ್ಳುತ್ತಿವೆ. ಇನ್ಮುಂದೆ, ಆದಾಯ ಅಥವಾ ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ, 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಹಿರಿಯ ನಾಗರಿಕರು ಈ ಆರೋಗ್ಯ ವಿಮೆಯ ಲಾಭವನ್ನು ಪಡೆಯಬಹುದು” ಎಂದು ತಿಳಿಸಿದ್ದಾರೆ,
ಈ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿಶಿಷ್ಟ ಗುರುತಿನ ಕಾರ್ಡ್ ನೀಡಲಾಗುವುದು. ಈ ಕಾರ್ಡ್‌ನೊಂದಿಗೆ ವರ್ಷಕ್ಕೆ 5 ಲಕ್ಷ ರೂಪಾಯಿಗಳವರೆಗೆ ಆರೋಗ್ಯ ವಿಮೆಯ ಪ್ರಯೋಜನವನ್ನು ಪಡೆಯಬಹುದು.