Live Stream

[ytplayer id=’22727′]

| Latest Version 8.0.1 |

Jobs News

ವಿವಿಧ ಸೌಲಭ್ಯ : ವಿಶ್ವಕರ್ಮ ಜನಾಂಗದವರಿ0ದ ಆನ್‌ಲೈನ್ ಅರ್ಜಿ ಆಹ್ವಾನ

ವಿವಿಧ ಸೌಲಭ್ಯ : ವಿಶ್ವಕರ್ಮ ಜನಾಂಗದವರಿ0ದ ಆನ್‌ಲೈನ್ ಅರ್ಜಿ ಆಹ್ವಾನ

ತುಮಕೂರು(ಕ.ವಾ.)ಜೂ.೯: ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಳಡಿ ಸೌಲಭ್ಯ ಕಲ್ಪಿಸಲು ಅರ್ಹ ವಿಶ್ವಕರ್ಮ ಸಮುದಾಯದವರಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ, ಅರಿವು-ಶೈಕ್ಷಣಿಕ ನೇರಸಾಲ(ಹೊಸದು-ನವೀಕರಣ), ಗಂಗಾಕಲ್ಯಾಣ, ಸ್ವಯಂ ಉದ್ಯೋಗ ನೇರಸಾಲ(ಬ್ಯಾಂಕ್‌ಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ, ವಿದೇಶಿ ವ್ಯಾಸಂಗ ಹಾಗೂ ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಹ ಅಭ್ಯರ್ಥಿಗಳು ಸ್ವಾತಂತ್ರ‍್ಯ ಅಮೃತ ಮುನ್ನಡೆ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಜಾಲತಾಣ https://sevasindhu.karnataka.gov.in ಹಾಗೂ ಉಳಿದ ಯೋಜನೆಗಳ ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್ hಣಣಠಿs://sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೂಲಕ ಗ್ರಾಮ ಒನ್, ತುಮಕೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ ೨ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್ https://kvcdcl.karnataka.gov.in ಅಥವಾ ನಿಗಮದ ಕೇಂದ್ರ ಕಚೇರಿಯ ದೂ.ಸ. ೦೮೦-೨೨೩೭೪೮೪೮/ ೭೮೯೯೮೯೯೦೩೯ ಅಥವಾ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂ.ವಾ.ಸಂಖ್ಯೆ ೦೮೧೬-೨೦೦೫೦೦೮ನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";