Live Stream

[ytplayer id=’22727′]

| Latest Version 8.0.1 |

Crime NewsPolitics News

ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

ಧಾರವಾಡ: ಜಿಲ್ಲಾ ಪಂ. ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಯವರನ್ನು ಸಿಬಿಐ ವಶಕ್ಕೆ ಪಡೆದಿದೆ. ಸುಪ್ರೀಂ ಕೋರ್ಟ್ನ ಆದೇಶದಂತೆ ಜಾಮೀನು ರದ್ದಾದ ಬಳಿಕ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಿಚಾರಣೆಗಾಗಿ ಕಸ್ಟಡಿಗೆ ತೆಗೆದುಕೊಂಡಿರುವರು, ವಿಚಾರಣೆ ಬಳಿಕ ಅವರನ್ನು ರಾಜಧಾನಿ ಬೆಂಗಳೂರು ನಗರದ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

2016ರ ಜೂನ್ 15ರಂದು ಯೋಗೇಶ್ ಗೌಡ ಅವರು ಧಾರವಾಡದಲ್ಲಿ ಕೊಲೆಯಾಗಿದ್ದರು. ವಿನಯ್ ಕುಲಕರ್ಣಿ ಅವರನ್ನು ಈ ಪ್ರಕರಣದ ಮುಖ್ಯ ಆರೋಪಿ ಎಂದೇ ಗುರುತಿಸಲಾಗಿದೆ. 2020ರ ನವೆಂಬರ್‌ನಲ್ಲಿ ಕುಲಕರ್ಣಿಯನ್ನು ಸಿಬಿಐ ಬಂಧನಕ್ಕೊಳಗಾಗಿದ್ದರು. 2021ರಲ್ಲಿ ಸುಪ್ರೀಂ ಕೋರ್ಟ್ನಿಂದ ಜಾಮೀನು ಪಡೆದಿದ್ದರು. ಸಾಕ್ಷಿಗಳಿಗೆ ಬೆದರಿಕೆ ಮತ್ತು ಪ್ರಭಾವ ಬೀರಿದ ಆರೋಪದ ಮೇಲೆ ಸಿಬಿಐ ಜಾಮೀನು ರದ್ದತಿಗೆ ಅರ್ಜಿ ಸಲ್ಲಿಸಿತು. ಜೂನ್ 6, 2025ರಂದು ಸುಪ್ರೀಂ ಕೋರ್ಟ್ನ ಜಸ್ಟೀಸ್ ಸಂಜಯ್ ಕರೋಲ್ ಮತ್ತು ಸತೀಶ್ ಚಂದ್ರ ಶರ್ಮಾರ ದ್ವಿಸದಸ್ಯ ಪೀಠ ಈ ಅರ್ಜಿಯನ್ನು ಪುರಸ್ಕರಿಸಿ, ಕುಲಕರ್ಣಿಯ ಜಾಮೀನನ್ನು ರದ್ದುಗೊಳಿಸಿತು. ಒಂದು ವಾರದೊಳಗೆ ಶರಣಾಗುವಂತೆ ನಿರ್ದೇಶನವೂ ನೀಡಿತ್ತು.

ಬಿಜೆಪಿಯು ವಿನಯ ಕುಲಕರ್ಣಿ ವಿರುದ್ಧ ತೀವ್ರ ಟೀಕೆಯನ್ನು ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ನ ನಾಯಕತ್ವವನ್ನು ಟೀಕಿಸಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಚುನಾವಣಾ ಪ್ರಚಾರದ ವೇಳೆ ಕುಲಕರ್ಣಿಯನ್ನು ಜೈಲಿಗೆ ಕಳುಹಿಸುವುದಾಗಿ ತಿಳಿಸಿದ್ದರು. ಅಧಿಕಾರಕ್ಕೆ ಬಂದ ಬಳಿಕ ಈ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲ್ಪಟ್ಟಿತು. ಸಿಬಿಐ ತನಿಖೆಯಲ್ಲಿ ವಿನಯ ಕುಲಕರ್ಣಿ ಆಪ್ತ ಬಸವರಾಜ ಮುತ್ತಗಿ ಅವರು ನಾವೂ ಕೊಲೆಯಲ್ಲಿ ಭಾಗಿಯಾಗಿದ್ದೇವೆ ಎಂದು ನ್ಯಾಯಾಲಯದಲ್ಲಿ ಒಪ್ಪಿಕೊಂಡಿದ್ದರು. ವಿಚಾರಣೆಯನ್ನು ಶೀಘ್ರವಾಗಿ ಮುಗಿಸಲು ಸುಪ್ರೀಂ ಕೋರ್ಟ್ ಮತ್ತು ಕರ್ನಾಟಕ ಹೈಕೋರ್ಟ್ ಒತ್ತಾಯಿಸಿವೆ. ಸಾಕ್ಷಿಗಳ ರಕ್ಷಣೆ ಮತ್ತು ನ್ಯಾಯದಾನಕ್ಕಾಗಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.

ವೀ ಕೇ ನ್ಯೂಸ್
";