Live Stream

[ytplayer id=’22727′]

| Latest Version 8.0.1 |

National NewsState News

ನಾವು ಆಟಕ್ಕೆ ವಿದೇಶಕ್ಕೆ ಹೋಗುತ್ತಿಲ್ಲ: ಪ್ರಿಯಾಂಕ್ ಖರ್ಗೆ 

ನಾವು ಆಟಕ್ಕೆ ವಿದೇಶಕ್ಕೆ ಹೋಗುತ್ತಿಲ್ಲ: ಪ್ರಿಯಾಂಕ್ ಖರ್ಗೆ 

ಬೆಂಗಳೂರು: ಕರ್ನಾಟಕದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರದಿಂದ ನಿರ್ಬಂಧ ಹೇರಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ಯಾರಿಸ್‌ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬುಧವಾರ ವಾಪಸಾಗಿ, ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ನಿರ್ಧಾರವು ಕರ್ನಾಟಕದ ಆರ್ಥಿಕ ಪ್ರಗತಿಗೆ ಅಡ್ಡಿಯಾಗಿದೆ ಎಂದು ಆರೋಪಿಸಿದರು.

ನಾವು ಆಟ ಆಡಲು ವಿದೇಶಕ್ಕೆ ಹೋಗುತ್ತಿಲ್ಲ. ರಾಜ್ಯದ ಜನರಿಗೆ ಉದ್ಯೋಗ ಸೃಷ್ಟಿಸುವುದು ಮತ್ತು ಬಂಡವಾಳ ಆಕರ್ಷಿಸುವುದು ನಮ್ಮ ಕರ್ತವ್ಯ. ಕರ್ನಾಟಕಕ್ಕೆ ಒಳಿತಾದರೆ, ದೇಶಕ್ಕೂ ಒಳಿತು. ಕರ್ನಾಟಕವು ಭಾರತದ ಆರ್ಥಿಕತೆಯ ಎಂಜಿನ್ ಇದ್ದಂತೆ,” ಎಂದು ಖರ್ಗೆ ಒತ್ತಿ ಹೇಳಿದರು. ಅಮೆರಿಕಕ್ಕೆ ತೆರಳದಂತೆ ಕೇಂದ್ರ ಸರ್ಕಾರದಿಂದ ವಿನಾಕಾರಣ ನಿರ್ಬಂಧ ಹೇರಲಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಕಳೆದ ಬಾರಿಯ ಅಮೆರಿಕ ಭೇಟಿಯಲ್ಲಿ, ಖರ್ಗೆ ಮತ್ತು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು 35-40 ಸಾವಿರ ಕೋಟಿ ರೂಪಾಯಿಗಳ ಒಪ್ಪಂದಗಳನ್ನು ‘ಇನ್ವೆಸ್ಟ್ ಕರ್ನಾಟಕ’ ಕಾರ್ಯಕ್ರಮದ ಮೂಲಕ ಒಡಂಬಡಿಕೆಗೆ ತಂದಿದ್ದರು. ಇತ್ತೀಚೆಗೆ ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ಉತ್ಪಾದನೆಗೆ ಸಂಬಂಧಿಸಿದಂತೆ 20 ಸಾವಿರ ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಲಾಗಿದೆ. ಇದರಿಂದ ಕರ್ನಾಟಕವು ಎಲೆಕ್ಟ್ರಾನಿಕ್ಸ್ ಮತ್ತು ಏರೋಸ್ಪೇಸ್ ಹಬ್‌ ಆಗಿ ಮಾರ್ಪಟ್ಟಿದೆ. “ನವೋದ್ಯಮದಲ್ಲಿ ಕರ್ನಾಟಕ ಅಗ್ರಸ್ಥಾನಕ್ಕೇರಿದೆ. ಆದರೂ, ಈ ಬಾರಿಯ ಅಮೆರಿಕ ಪ್ರವಾಸದ ಪ್ರಸ್ತಾವವನ್ನು ಕೇಂದ್ರ ಯಾಕೆ ತಿರಸ್ಕರಿಸಿತು ಎಂಬುದಕ್ಕೆ ಸ್ಪಷ್ಟ ಕಾರಣವಿಲ್ಲ,” ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು. ವಿದೇಶಿ ಪ್ರವಾಸಕ್ಕೆ ಮೊದಲಿಗೆ ನಿಯೋಗಕ್ಕೆ ಅನುಮತಿ ನೀಡದ ಕೇಂದ್ರ, ನಂತರ ಕೆಲವರಿಗೆ ಅನುಮತಿ ನೀಡಿತು. ಆದರೆ, ಖರ್ಗೆ ಅವರಿಗೆ ಅನುಮತಿ ನಿರಾಕರಿಸಿತು. “ಈ ಎಲ್ಲ ವಿಷಯಗಳ ಬಗ್ಗೆ ಕೇಂದ್ರ ಸರ್ಕಾರವು ಮುಖ್ಯಮಂತ್ರಿಗಳಿಗೆ ಸ್ಪಷ್ಟ ಮಾಹಿತಿ ನೀಡಬೇಕು. ಈ ನಿರ್ಧಾರ ಸರಿಯಲ್ಲ, ಇದರ ಬಗ್ಗೆ ಮುಂದೆ ಮಾತನಾಡುವೆ,” ಎಂದು ಖರ್ಗೆ ಎಚ್ಚರಿಕೆ ನೀಡಿದರು.

ವೀ ಕೇ ನ್ಯೂಸ್
";