Live Stream

[ytplayer id=’22727′]

| Latest Version 8.0.1 |

State News

ಆಡಿಯೋ ನಿಜ, ಲೀಕ್ ಮಾಡಿದ್ದು ತಪ್ಪೆಂದು ಜಮೀರ್ ಆಪ್ತ

ಆಡಿಯೋ ನಿಜ, ಲೀಕ್ ಮಾಡಿದ್ದು ತಪ್ಪೆಂದು ಜಮೀರ್ ಆಪ್ತ

ಬೆಂಗಳೂರು: ರಾಜ್ಯ ಸರ್ಕಾರದ ಬುಡಕ್ಕೆ ಈಗ ಮತ್ತೊಂದು ಭ್ರಷ್ಟಾಚಾರ ಬಾಂಬ್ ಬಿದ್ದಿದೆ, ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದವರಿಗೆಷ್ಟೇ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾದ್ಯಕ್ಷ, ಆಳಂದ ಶಾಸಕ ಬಿ ಆರ್ ಪಾಟೀಲ್ ತಮ್ಮದೇ ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾದ ಆಡಿಯೊವೊಂದು ವೈರಲ್ ಆಗಿದೆ,
ವಸತಿ ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿ ಸರ್ಘರಾಜ್ ಖಾನ್ ಮೊಬೈಲ್ ಗೆ ಕರೆ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಪಾಟೀಲ್ ಹಣೆ ಪಡೆದು ಯಾವ ಗ್ರಾಮಕ್ಕೆ ಎಷ್ಟು ಮನೆಗಳನ್ನು ಮಂಜೂರು ಮಾಡಲಾಗಿದೆ? ಎಂಬ ಮಾಹಿತಿ ಪಡೆದುಕೊಂಡಿದ್ದಾರೆ, ಅಲ್ಲದೇ ಈ ಮಾಹಿತಿಯನ್ನು ನಾನು ಬಹಿರಂಗಪಡಿಸಿದ್ರೆ ಸರ್ಕಾರವೇ ಅಲುಗಾಡುತ್ತೆ ಎಂದು ಶಾಸಕರು ಎಚ್ಚರಿಕೆ ನೀಡಿದ್ದಾರೆ,

ಆಡಿಯೋ ಸತ್ಯ ಎಂಬ ಸರ್ಘರಾಜ್ ಖಾನ್
ವಸತಿ ಯೋಜನೆ ಅಡಿ ಮನೆ ಹಂಚಿಕೆ ಮಾಡಲು ಹಣ ಪಡೆಯಲಾಗಿದೆ ಎಂಬ ಆರೋಪ ಸತ್ಯ ಎಂದು ಸಚಿವ ಜಮೀರ್ ಅಹಮದ್ ಖಾನ್ ಆಪ್ತ ಕಾರ್ಯದರ್ಶಿ ಸರ್ಘರಾಜ್ ಖಾನ್ ಹೇಳಿದ್ದಾರೆ, ಆಡಿಯೋ ಬಹಿರಂಗವಾಗಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಖಾನ್, ಪ್ರಕರಣದ ಬಗ್ಗೆ ಸಚಿವ ಜಮೀರ್ ಗಮನಕ್ಕೆ ತಂದಿದ್ದೇನೆ ಎಂದಿದ್ದಾರೆ,
ದೂರವಾಣಿಯಲ್ಲಿ ಮಾತನಾಡಿದ್ದನ್ನು ಸೋರಿಕೆ ಮಾಡಿದ್ದು ತಪ್ಪ, ಜನಪ್ರತಿನಿಧಿ ಎಂಬ ಕಾರಣಕ್ಕೆ ಮಾತನಾಡಿದ್ದೇನೆ, ಅವರೇ ಕರೆ ಮಾಡಿ ಆಡಿಯೋ ರೆಕಾರ್ಡ್ ಮಾಡಿ ಲೀಕ್ ಮಾಡಿದ್ದಾರೆ ಎಂದು ಸರ್ಘರಾಜ್ ಖಾನ್ ಕಿಡಿಕಾರಿದ್ದಾರೆ, ಆ ಮೂಲಕ ವೈರಲ್ ಆಗಿರುವ ಆಡಿಯೋ ಅಸಲಿ ಎಂದು ಒಪ್ಪಿಕೊಂಡಂತಾಗಿದೆ,
ಹಣ ತೆಗೆದುಕೊಂಡು ಮನೆ ಹಂಚಿಕೆ ಮಾಡಿದ್ದರೆ ತಿಳಿಸಿ ಅಂಥವರನ್ನು ಜೈಲಿಗೆ ಕಳುಹಿಸುತ್ತೇವೆ ಎಂದು ಆಡಿಯೋದಲ್ಲೂ ಸ್ಪಷ್ಟವಾಗಿ ಹೇಳಿದ್ದೇನೆ, ನನ್ನದು ಐಪೋನ್, ಇದರಲ್ಲಿ ರೆಕಾರ್ಡಿಂಗ್ ಮಾಡಿಕೊಳ್ಳಲು ಆಗುವುದಿಲ್ಲ, ಅವರೇ ರೆಕಾರ್ಡ್ ಮಾಡಿ ಲೀಕ್ ಮಾಡಿದ್ದು ತಪ್ಪು ಸಚಿವ ಜಮೀರ್ ಸಲಹೆ ಪಡೆದು ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಸರ್ಘರಾಜ್ ಖಾನ್ ತಿಳಿಸಿದ್ದಾರೆ,
ಪ್ರತಿಪಕ್ಷ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ರಾಜೀನಾಮೆಗೆ ಆಗ್ರಹಿಸಿದ್ದಾರೆ, ಈ ಎಲ್ಲಾ ಬೆಳವಣಿಗೆಗೆಳ ಬೆನ್ನಲ್ಲೇ ಇದೀಗ ವೈರಲ್ ಆಗಿರುವ ಆಡಿಯೊ ನಿಜ ಎಂದು ಸರ್ಘರಾಜ್ ಖಾನ್ ಒಪ್ಪಿಕೊಂಡಂತಾಗಿದೆ,

ವೀ ಕೇ ನ್ಯೂಸ್
";