ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ. ಶಾಸಕರ ಜತೆಗಿನ ಮುಖಾಮುಖಿ ಸಭೆಯಲ್ಲೂ ಈ ವಿಚಾರ ಚರ್ಚೆಯಾಗುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಾಸಕರೊಂದಿಗಿನ ಸಭೆಯಲ್ಲಿ ಪಕ್ಷದ ಸಂಘಟನೆ ಮತ್ತು ಆಡಳಿತ ಕುರಿತ ವೈಯಕ್ತಿಕ ಅಭಿಪ್ರಾಯವನ್ನಷ್ಟೇ ಪಡೆಯಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಳೆದೆರಡು ದಿನಗಳಲ್ಲಿ ಮೈಸೂರು ಮತ್ತು ಬೆಂಗಳೂರು ವಿಭಾಗದ ಶಾಸಕರ ಭೇಟಿ ಮಾಡಿ ಮಾತುಕತೆ ನಡೆಸಿದ್ದೇನೆ. ಮುಂದಿನ ಸೋಮವಾರದಿಂದ ಇತರ ಭಾಗದ ಶಾಸಕರನ್ನು ಕರೆದು ಮಾತನಾಡುತ್ತೇನೆ. ನಂತರದಲ್ಲಿ ಸಂಸದರು, ಮಾಜಿ ಸಂಸದರನ್ನು ಭೇಟಿ ಮಾಡಲಾಗುವುದು. ಈ ಸಭೆಗಳಲ್ಲಿ ಕಳೆದೆರಡು ವರ್ಷಗಳಲ್ಲಿ ಕ್ಷೇತ್ರದಲ್ಲಿ ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಶಾಸಕರಿಂದ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಜಿಲ್ಲಾ ಮತ್ತು ಬ್ಲಾಕ್ ಕಾಂಗ್ರೆಸ್ ಸೇರಿ ಇತರ ವಿಭಾಗಗಳ ಚಟುವಟಿಕೆ ಕುರಿತು ಮಾಹಿತಿ ಪಡೆಯಲಾಗುವುದು ಎಂದರು.
Veekay News > State News > ರಾಜ್ಯದಲ್ಲಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ: ಸುರ್ಜೇವಾಲ
ರಾಜ್ಯದಲ್ಲಿ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚರ್ಚೆಯಿಲ್ಲ: ಸುರ್ಜೇವಾಲ
ವೀ ಕೇ ನ್ಯೂಸ್02/07/2025
posted on

the authorವೀ ಕೇ ನ್ಯೂಸ್
All posts byವೀ ಕೇ ನ್ಯೂಸ್
Leave a reply