ಬೆಂಗಳೂರು : ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ 3 ಸಂಬ0ಧ ಪರೀಕ್ಷಾ ಕೇಂದ್ರಗಳ ಸುತ್ತ ಜಿಲ್ಲಾಧಿಕಾರಿಗಳು ಬೆಂಗಳೂರು ನಗರ ಜಿಲ್ಲೆಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಿರುತ್ತಾರೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಕಯಿಂದ ದಿನಾಂಕ 5-7-2025ರ ಶನಿವಾರದಿಂದ ದಿನಾಂಕ : 12-7-2025ರ ಶನಿವಾರದವರೆಗೆ ನಡೆಯಲಿರುವ ಪರೀಕ್ಷೆಗಳನ್ನು ಸುಗಮವಾಗಿ ಹಾಗೂ ಸುವ್ಯವಸ್ಥೆಯಿಂದ ನಡೆಸುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿರುತ್ತದೆ. ಪರೀಕ್ಷಾ ಸಂಬ0ಧ ಮೇಲ್ಕಂಡ ಪರೀಕ್ಷಾ ದಿನಗಳಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿರುತ್ತಾರೆ. ನಿಷೇಧಿತ ಪ್ರದೇಶದಲ್ಲಿ ಝೆರಾಕ್ಸ್ / ಕಂಪ್ಯೂಟರ್ ಟೈಪಿಂಗ್ ಕೇಂದ್ರ ಹಾಗೂ ಸೈಬರ್ ಕೇಂದ್ರಗಳನ್ನು ತೆರೆಯದಂತೆ ಆದೇಶಿಸಿರುತ್ತಾರೆ.