Live Stream

[ytplayer id=’22727′]

| Latest Version 8.0.1 |

Education News

ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಜುಲೈ ಆವೃತ್ತಿಗೆ ಪ್ರವೇಶಾತಿ ಆರಂಭ

ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಜುಲೈ ಆವೃತ್ತಿಗೆ ಪ್ರವೇಶಾತಿ ಆರಂಭ

ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸಕ್ತ 2025-26ನೇ ಶೈಕ್ಷಣಿಕ ಸಾಲಿಗೆ ಜುಲೈ ಆವೃತ್ತಿಗೆ ಪ್ರವೇಶಾತಿ ಆರಂಭಿಸಲಾಗಿದ್ದು, ಜುಲೈ 01 ರಿಂದ ಪ್ರವೇಶ ಪ್ರಕ್ರಿಯೆ ಪ್ರಾರಂಭವಾಗಿದೆ.

ಸ್ನಾತಕ / ಸ್ನಾತಕೋತ್ತರ ಕೋರ್ಸ್‍ಗಳಾದ ಬಿ.ಎ, ಬಿ.ಕಾಂ, ಬಿ.ಎಸ್.ಡಬ್ಲೂ, ಬಿ.ಬಿ.ಎ, ಬಿ.ಸಿ.ಎ, ಬಿ.ಎಸ್ಸಿ-(ಜನರಲ್ ಮತ್ತು ಐ.ಟಿ), ಬಿ.ಎಲ್.ಐ.ಎಸ್ಸಿ, ಎಂ.ಎ, ಎಂ.ಸಿ.ಜೆ, ಎಂ.ಎಸ್.ಡಬ್ಲ್ಯೂ, ಎಂ.ಕಾಂ, ಎಂ.ಎಲ್.ಐ.ಎಸ್ಸಿ, ಎಂ.ಸಿ.ಎ, ಎಂ.ಎಸ್ಸಿ, ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್ ಪ್ರೋಗ್ರಾಮ್ಸ್, ಡಿಪ್ಲೋಮಾ ಪ್ರೋಗ್ರಾಮ್ಸ್, ಸರ್ಟಿಫಿಕೇಟ್ ಪ್ರೋಗ್ರಾಮ್ಸ್‍ಗಳಿಗೆ ಪ್ರವೇಶಾತಿಯನ್ನು ಮಾಡಿಕೊಳ್ಳಲಾಗುತ್ತಿದೆ. ಕರಾಮುವಿಯು ಮಲ್ಲೇಶ್ವರಂನ  ಪ್ರಾದೇಶಿಕ ಕೇಂದ್ರದಲ್ಲಿ ಮಹಿಳಾ ಮತ್ತು ಪುರುಷ ವಿದ್ಯಾರ್ಥಿಗಳಿಗೆ ಪ್ರವೇಶಾತಿಗೆ ಅವಕಾಶ ಕಲ್ಪಿಸಿದೆ.

ಕರಾಮುವಿಯ ಅಧಿಕೃತ ವೆಬ್‍ಸೈಟ್ www.ksoumysuru.ac.in ನಲ್ಲಿ  KSOU Admission Portal ಮೂಲಕ ನಿಗದಿಪಡಿಸಿರುವ ಪದವಿಗಳಿಗೆ ಆನ್‍ಲೈನ್‍ನಲ್ಲಿ ಅರ್ಜಿ ಭರ್ತಿ ಮಾಡಿ ನಂತರ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್‍ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು.

ಬಿ.ಪಿ.ಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ, ಡಿಫೆನ್ಸ್ ಹಾಗೂ ಮಾಜಿ ಸೈನಿಕ ವಿದ್ಯಾರ್ಥಿಗಳಿಗೆ,  ಆಟೋ / ಕ್ಯಾಬ್ ಚಾಲಕರು ಮತ್ತು ಅವರ ಮಕ್ಕಳಿಗೆ, ಕೆ.ಎಸ್.ಆರ್.ಟಿ.ಸಿ, ಬಿ.ಎಂ.ಟಿ.ಸಿ, ಎನ್.ಡಬ್ಯ್ಲೂಕೆ.ಆರ್.ಟಿ.ಸಿ, ಕೆ.ಕೆ.ಆರ್.ಟಿಸಿ ನೌಕರರುಗಳಿಗೆ ಶೇಕಡ 10 ರಷ್ಟು ಬೋಧನಾ ಶುಲ್ಕದಲ್ಲಿ ರಿಯಾಯಿತಿ ನೀಡಲಾಗಿದೆ.

ಕೋವಿಡ್-19ರ ಸಾಂಕ್ರಾಮಿಕ ರೋಗದಿಂದ ಮೃತರಾದ ಪೋಷಕರ ಮಕ್ಕಳಿಗೆ, ತೃತೀಯ ಲಿಂಗದ (Transgender) ವಿದ್ಯಾರ್ಥಿಗಳಿಗೆ, ದೃಷ್ಠಿ ಹೀನ ವಿದ್ಯಾರ್ಥಿಗಳಿಗೆ (ಬಿ.ಇಡಿ, ಎಂ.ಬಿ.ಎ. ಹೊರತುಪಡಿಸಿ) ಪೂರ್ಣ ಶುಲ್ಕ ವಿನಾಯಿತಿ ನೀಡಲಾಗಿದೆ.   ಎಸ್.ಸಿ./ಎಸ್.ಟಿ./ ಒಬಿಸಿ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸಿದಲ್ಲಿ ಎಸ್.ಎಸ್.ಪಿ ಮುಖಾಂತರ ವಿದ್ಯಾರ್ಥಿವೇತನ ಸೌಲಭ್ಯವಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಶಶಿಕಲಾ ಜೆ, ಪ್ರಾದೇಶಿಕ ನಿರ್ದೇಶಕರು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮಹಿಳಾ ಪ್ರಾದೇಶಿಕ ಕೇಂದ್ರ, ಸರ್ಕಾರಿ ಪದವಿ ಪೂರ್ವ ಬಾಲಕಿಯರ ಕಾಲೇಜು, 4ನೇ ಮುಖ್ಯ ರಸ್ತೆ, 13ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು-03. ಹಾಗೂ ಕಛೇರಿ ದೂರವಾಣಿ ಸಂಖ್ಯೆ: 080-23448811, 9741197921, 9483517160, 7760848564, 9620395584, 8553064767 ಗೆ ಸಂಪರ್ಕಿಸಬಹುದು ಎಂದು ಪ್ರಾದೇಶಿಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಮಾರ್ಗದರ್ಶಿ

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";