ಪಾಟ್ನಾ: ಕೇಂದ್ರ ಸಚಿವ ಹಾಗೂ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜೀವ ಬೆದರಿಕೆ ಹಾಕಲಾಗಿದೆ ಎಂದು ಪಕ್ಷದ ವಕ್ತಾರ ರಾಜೇಶ್ ಭಟ್ ತಿಳಿಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಈ ಕರೆ ಬಂದಿದ್ದು, ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷವು ಪಾಟ್ನಾದ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿದೆ.
ಬAದಿರುವ ದೂರಿನ ಮಾಹಿತಿಯಂತೆ, `ಟೈಗರ್ ಮೆರಾಜ್ ಇಡಿಸಿ’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಈ ಬೆದರಿಕೆ ಸಂದೇಶ ಬಂದಿದೆ. ಈ ಧಮಕಿಯ ಹಿಂದೆ ಚಿರಾಗ್ ಪಾಸ್ವಾನ್ ಅವರ ಜನಪ್ರಿಯತೆ ಹೆಚ್ಚಾಗುತ್ತಿರುವುದೇ ಇದಕ್ಕೆಲ್ಲಾ ಕಾರಣ ಎಂದು ರಾಜೇಶ್ ಭಟ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ. “ಈ ಕೃತ್ಯವು ಕ್ರಿಮಿನಲ್ ಉದ್ದೇಶ ಮತ್ತು ಕಾನೂನುಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಈ ವಿಷಯದ ಗಂಭೀರತೆಯನ್ನು ಅರಿತು ತಕ್ಷಣ ಕ್ರಮ ಕೈಗೊಳ್ಳಬೇಕು. ಆರೋಪಿಯನ್ನು ತಕ್ಷಣ ಬಂಧಿಸಿ, ಕಠಿಣ ಶಿಕ್ಷೆಯನ್ನು ಖಾತರಿಪಡಿಸಬೇಕು” ಎಂದು ರಾಜೇಶ್ ಭಟ್ ತಮ್ಮ ದೂರಿನಲ್ಲಿ ವಿನಂತಿಸಿಕೊAಡಿದ್ದಾರೆ.
ಘಟನೆಯು ಬಿಹಾರದ ರಾಜಕೀಯ ವಲಯದಲ್ಲಿ ಈಗಾಗಲೇ ಸಂಚಲನ ಮೂಡಿಸಿದ್ದು, ಚಿರಾಗ್ ಪಾಸ್ವಾನ್ ಅವರ ಚುನಾವಣಾ ಭಾಗವಹಿಸುವಿಕೆಯ ಘೋಷಣೆಯ ನಂತರ ಈ ಬೆದರಿಕೆ ಬಂದಿರುವುದು ಗಮನಾರ್ಹವಾಗಿದೆ ಎನ್ನಬಹುದು.
VK NEWS HEADLINES :