ಫಾಸ್ಟ್ ಫುಡ್ ತಯಾರಿಕೆ ಮತ್ತು ಮಾರಾಟ ಕ್ಷೇತ್ರದಲ್ಲಿ(Free fast food training)ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳಿಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಕೇಂದ್ರದಿಂದ ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸ್ತುತ ಫಾಸ್ಟ್ ಫುಡ್(Fast food training) ಸ್ಟಾಲ್ ಉದ್ಯಮಿ ಕ್ಷೇತ್ರವು ಉತ್ತಮ ಆದಾಯ ತರಬಲ್ಲ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ದಿನೇ ದಿನೇ ಬೇಡಿಕೆಯು ಏರುಗತಿಯಲ್ಲಿ ಸಾಗುತ್ತಿದ್ದು, ಈ ವಿಭಾಗದಲ್ಲಿ ಸ್ವಂತ ಉದ್ದಿಮೆಯನ್ನು ಪ್ರಾರಂಭಿಸಲು ಆಸಕ್ತಿಯಿರುವ ಅಭ್ಯರ್ಥಿಗಳು ಈ ಲೇಖನದಲ್ಲಿ ವಿವರಿಸಿರುವ ಮಾಹಿತಿಯನ್ನು ಸಂಪೂರ್ಣವಾಗಿ ತಿಳಿದುಕೊಂಡು ಮುಂಚಿತವಾಗಿ ನೋಂದಣಿಯನ್ನು ಮಾಡಿಕೊಂಡು ತರಬೇತಿಯಲ್ಲಿ ಭಾಗವಹಿಸಬಹುದು.
ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಯಲ್ಲಿ ಭಾಗವಹಿಸಲು ಯಾರೆಲ್ಲ ಅರ್ಜಿ ಸಲ್ಲಿಸಬಹುದು? ಅರ್ಜಿ ಸಲ್ಲಿಸಲು ಅವಶ್ಯಕ ದಾಖಲಾತಿಗಳೇನು?ತರಬೇತಿ ಪ್ರಾರಂಭ ದಿನಾಂಕ ಹಾಗೂ ಫಾಸ್ಟ್ ಫುಡ್ ಉದ್ದಿಮೆ ಆರಂಭಿಸಲು ಯಾವೆಲ್ಲ ಯೋಜನೆಯಡಿ ಸಹಾಯಧನ ಪಡೆಯಬಹುದು? ಎನ್ನುವ ಮಾಹಿತಿ ಸೇರಿದಂತೆ ಇನ್ನಿತರೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ತಿಳಿಸಲಾಗಿದೆ.
12 Days Fast Food Training-ಅರ್ಜಿ ಸಲ್ಲಿಸಲು ಅರ್ಹರು:
ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.
ಕನ್ನಡ ಬಾಷೆಯನ್ನು ಓದಲು ಮತ್ತು ಬರೆಯಲು ಬರುವುದು ಕಡ್ಡಾಯವಾಗಿರುತ್ತದೆ.
ಗ್ರಾಮೀಣ ಭಾಗದಲ್ಲಿ ವಾಸಿರುವ ಬಿ.ಪಿ.ಎಲ್ ಕಾರ್ಡ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲ ಅದ್ಯತೆ ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವಂತ ಉದ್ದಿಮೆಯನ್ನು ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.
Fast food business- ಈ ತರಬೇತಿಯು ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ:
ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯು ಒಟ್ಟು 12 ದಿನ ನಡೆಯಲಿದ್ದು, ತರಬೇತಿಯಲ್ಲಿ ಬಾಗವಹಿಸುವ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಕಟ್ಟುವ ಅವಶ್ಯಕತೆ ಇರುವುದಿಲ್ಲ.
Bank loan for fast food business- ಬ್ಯಾಂಕ್ ಮೂಲಕ ಸಾಲ ಸೌಲಭ್ಯ:
ಫಾಸ್ಟ್ ಫುಡ್ ಸ್ಟಾಲ್ ಉದ್ಯಮಿ ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ತರಬೇತಿಯಲ್ಲಿ ಉಚಿತವಾಗಿ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆಯಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ಮೂಲಕ ಸಹಾಯಧನದಲ್ಲಿ ಸಾಲವನ್ನು ತೆಗೆದುಕೊಂಡು ಉದ್ಯಮಿಯನ್ನು ಆರಂಭಿಸಬಹುದು ಎಂದು ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ.
Fast food Training-ತರಬೇತಿಯಲ್ಲಿ ಯಾವೆಲ್ಲ ವಿಷಯದ ಕುರಿತು ಮಾಹಿತಿ ತಿಳಿಸಲಾಗುತ್ತದೆ?
ತರಬೇತಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಈ ಕೇಂದ್ರದಿಂದ ಪಾನಿಪುರಿ, ಮಸಾಲಪುರಿ, ಗೋಬಿ ಮಂಚೂರಿ, ಸಮೋಸ,ಕಚೋರಿ,ನೂಡಲ್ಸ್, ಕೇಕ್, ಪಪ್ಸ್ ಹಾಗೂ ಸಿಹಿ ತಿಂಡಿಗಳನ್ನು ತಯಾರಿಕೆ ಮಾಡುವ ವಿಧಾನದ ಕುರಿತು ಪ್ರಯೋಗಿಕವಾಗಿ ತಿಳಿಸಿಕೊಡಲಾಗುತ್ತದೆ.
VK NEWS HEADLINES :