Live Stream

[ytplayer id=’22727′]

| Latest Version 8.0.1 |

Bengaluru Rural

ಶಕ್ತಿ ಯೋಜನೆಯ 500 ಕೋಟಿ ಉಚಿತ ಟಿಕೆಟ್ ವಿತರಣೆ; ಸಿಹಿ ಹಂಚಿ ಸಂಭ್ರಮ

ಶಕ್ತಿ ಯೋಜನೆಯ 500 ಕೋಟಿ ಉಚಿತ ಟಿಕೆಟ್ ವಿತರಣೆ; ಸಿಹಿ ಹಂಚಿ ಸಂಭ್ರಮ

ದೇವನಹಳ್ಳಿ ಟೌನ್‍ನ ಬಸ್ ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಜು.13 ರಿಂದ 16 ರವರೆಗೆ ಹಮ್ಮಿಕೊಂಡಿರುವ ಸರ್ಕಾರದ ಎರಡು ವರ್ಷದ ಸಾಧನೆ ಹಾಗೂ ಸರ್ಕಾರದ ಯೋಜನೆಗಳನ್ನು ಬಿಂಬಿಸುವ ವಸ್ತು ಪ್ರದರ್ಶನಕ್ಕೆ ಗ್ಯಾರಂಟಿ ಯೋಜನೆ ಅನುμÁ್ಠನ ಸಮಿತಿಯ ತಾಲ್ಲೂಕು ಅಧ್ಯಕ್ಷ ಜಗನ್ನಾಥ ಅವರು ಚಾಲನೆ ನೀಡಿದರು.

ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳ ಲಾಭ ಪ್ರತಿಯೊಬ್ಬ ಅರ್ಹ ಫಲಾನುವಿಗೆ ದೊರಕಿಸುವ ನಿಟ್ಟಿನಲ್ಲಿ, ಗ್ಯಾರಂಟಿ ಯೋಜನೆಗಳು ಒಳಗೊಂಡಂತೆ ಸರ್ಕಾರದ ಜನಪರ ಯೋಜನೆಗಳ, ಅಭಿವೃದ್ಧಿ-ಸಾಧನೆಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ.

ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಯೋಜನೆಗಳ ಸಮಗ್ರ ಮಾಹಿತಿ, ಫಲಾನುಭವಿಗಳ ಅನಿಸಿಕೆ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳನ್ನೊಳಗೊಂಡ ಸಮಗ್ರ ಮಾಹಿತಿಯುಳ್ಳ ಫಲಕಗಳನ್ನು ಅಳವಡಿಸಲಾಗಿದ್ದು, ವಸ್ತು ಪ್ರದರ್ಶನವು ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದೆ ಎಂದರು.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಹೊಸ ಮೈಲಿಗಲ್ಲು ಸ್ಥಾಪಿಸಿದ್ದು ಮಹಿಳಾ ಪ್ರಯಾಣಿಕರ ಸಂಖ್ಯೆ ಇಂದು 500 ಕೋಟಿ ಉಚಿತ ಟಿಕೆಟ್ ವಿತರಣೆ ತಲುಪಿದೆ.

ಹಾಗಾಗಿ ದೇವನಹಳ್ಳಿ ಟೌನ್ ಬಸ್ ನಿಲ್ದಾಣದಲ್ಲಿ ಬಸ್ ಗಳಿಗೆ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಿ ಬಸ್ ನಲ್ಲಿ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಸಿಹಿ ಹಂಚಿ ಸಂಭ್ರಮಿಸಲಾಯಿತು. ಇವತ್ತು ನಾವೆಲ್ಲ ಒಳ್ಳೆಯ ದಿನಗಳನ್ನು ಕಾಣುತ್ತಿದ್ದೇವೆ, ಶಕ್ತಿ ಯೋಜನೆ, ಗೃಹಲಕ್ಷ್ಮಿ, ಅನ್ನ ಭಾಗ್ಯ, ಗೃಹಜ್ಯೋತಿ, ಯುವನಿಧಿ ಈ ರೀತಿಯ ಯೋಜನೆಗಳನ್ನು ಹಿಂದಿನ ಯಾವ ಸರ್ಕಾರವು ಮಾಡಿರಲಿಲ್ಲ ನಮ್ಮ ಸರ್ಕಾರ ನುಡಿದಂತೆ ನಡೆದಿದೆ ಎಂದರು.

2023 ರ ಜೂನ್ 11 ರಂದು ಶಕ್ತಿ ಯೋಜನೆ ಜಾರಿಗೆ ಬಂತು ಕಳೆದ 2 ವರ್ಷ ಒಂದು ತಿಂಗಳ ಅವಧಿಯಲ್ಲಿ ಕೆ.ಎಸ್.ಆರ್.ಟಿ.ಸಿ ಮತ್ತು ಬಿಎಂಟಿಸಿ ಸೇರಿದಂತೆ ಸರಕಾರಿ ಸಾರಿಗೆ ಸಂಸ್ಥೆಯ 4 ನಿಗಮಗಳ ಸಾಮಾನ್ಯ ಸಾರಿಗೆ ಬಸ್‍ಗಳಲ್ಲಿ ಇದುವರೆಗೆ ಮಹಿಳಾ ಪ್ರಯಾಣಿಕರಿಗೆ ವಿತರಣೆ ಮಾಡಿದ ಉಚಿತ ಟಿಕೆಟ್‍ಗಳ ಸಂಖ್ಯೆ ಇಂದು 500 ಕೋಟಿ ತಲುಪಲಿದೆ.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಮುನಿಕೃಷ್ಣ, ಬಮುಲ್ ನಿರ್ದೇಶಕ ಎಸ್.ಪಿ ಮುನಿರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಕೆ.ಸಿ ಮಂಜುನಾಥ, ಲಕ್ಷ್ಮೀನಾರಾಯಣಪ್ಪ, ಅನಂತಕುಮಾರಿ, ಮುಖಂಡರಾದ ಚಿನ್ನಪ್ಪ, ರವಿಕುಮಾರ್, ಪುರಸಭೆ ಮುಖ್ಯಾಧಿಕಾರಿ ದೊಡ್ಡಮಲ್ಲಯ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕರಾದ ಅಶೋಕ್ ಕುಮಾರ್ ಡಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶ್ರೀನಾಥ್ ಗೌಡ, ಹಿರಿಯ ಆರೋಗ್ಯ ನಿರೀಕ್ಷಕಿ ಶ್ರೀದೇವಿ, ನಗರ ಸಾರಿಗೆ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಇತರರು ಉಪಸ್ಥಿತರಿದ್ದರು.

 

ಅಭಿನಯ ಸರಸ್ವತಿ ಬಿ ಸರೋಜಾದೇವಿ ಇನ್ನಿಲ್ಲ

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";