
ವರ್ಚುಯಲ್ ಮೂಲಕ ಸರ್ವೋಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಸೂರ್ಯ ಕಾಂತ್ ಅವರು ಮಾತನಾಡಿ, ಜಮ್ಮು ಕಾಶ್ಮೀರದಲ್ಲಿ ಜರುಗಿದ ಪ್ರಾದೇಶಿಕ ಸಮ್ಮೇಳನದ ಅಂಗವಾಗಿ ರಕ್ಷಣಾ ಸಿಬ್ಬಂದಿಗಳಿಗೆ, ಮಾಜಿ ಸೈನಿಕರಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ಮತ್ತು ಪರಿಣಾಮಕಾರಿ ಕಾನೂನು ಸೇವೆಯನ್ನು ಒದಗಿಸುವ ಸಲುವಾಗಿ ಈ ಹೊಸ ಯೋಜನೆಯನ್ನು ದೇಶದಾದ್ಯಂತ ಜಾರಿಗೆ ತರಲು ರೂಪಿಸಲಾಗಿದೆ ಎಂದರು.
ಬೆಂಗಳೂರಿನ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ರಾಜ್ಯ ಸೈನಿಕ ಮಂಡಳಿಯಲ್ಲಿ ಉಚ್ಛ ನ್ಯಾಯಾಲಯದ ಗೌರವಾನ್ವಿತ ಮುಖ್ಯ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿಭು ಬಕ್ರು ಅವರು ಸಾಂಕೇತಿಕವಾಗಿ ಉಚಿತ ಕಾನೂನು ಸೇವೆಗಳ ಕ್ಲಿನಿಕ್ ಅನ್ನು ಉದ್ಘಾಟಿಸಿದರು. ಈ ಸೇವೆಯು ರಕ್ಷಣಾ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬದ ಸದಸ್ಯರಿಗೆ ಕಾನೂನು ಸೇವೆ ಒದಗಿಸುವುದು ಈ ಕ್ಲಿನಿಕ್ ನ ಮುಖ್ಯ ಉದ್ದೇಶವಾಗಿದೆ.