Live Stream

[ytplayer id=’22727′]

| Latest Version 8.0.1 |

Bengaluru Urban

6.90 ಕೋಟಿ ರೂ. ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

6.90 ಕೋಟಿ ರೂ. ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ):  ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 6.90  ಕೋಟಿ ಅಂದಾಜು ಮೌಲ್ಯದ ಒಟ್ಟು ಎಕರೆ 3 ಎಕರೆ 0.05  ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.

ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ  ಒತ್ತುವರಿಯಾಗಿದ್ದ ಸರ್ಕಾರಿ ತೋಪು, ಖರಾಬು ಕಲ್ಲುಬೆಟ್ಟ, ಸರ್ಕಾರಿ ಕೆರೆ, ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

ಆನೇಕಲ್‍ ತಾಲ್ಲೂಕಿನ  ಕಸಬಾ  ಹೋಬಳಿಯ ಚಿಕ್ಕನಹಳ್ಳಿ ಗ್ರಾಮದ  ಸ.ನಂ. 11 ರ ಸರ್ಕಾರಿ ತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.23 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ  0.25 ಲಕ್ಷಗಳಾಗಿರುತ್ತದೆ.

ಬೆಂಗಳೂರು ಉತ್ತರ ತಾಲ್ಲೂಕಿನ  ದಾಸನಪುರ ಹೋಬಳಿಯ ಗೊಲ್ಲರಪಾಳ್ಯ ಗ್ರಾಮದ ಸ.ನಂ 28 ರ  ಖರಾಬು ಕಲ್ಲುಬೆಟ್ಟ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ  0.50 ಲಕ್ಷಗಳಾಗಿರುತ್ತದೆ.

ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ಕಾಕೋಳು ಗ್ರಾಮದ ಸ.ನಂ 44ರ ಸರ್ಕಾರಿ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ  6.15  ಕೋಟಿಗಳಾಗಿರುತ್ತದೆ.

ಇದೇ ಸಂದರ್ಭದಲ್ಲಿ  ವಿವಿಧ ತಾಲ್ಲೂಕಿನ ತಹಶೀಲ್ದಾರ್  ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";