Live Stream

[ytplayer id=’22727′]

| Latest Version 8.0.1 |

Education News

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ, ಆಗಸ್ಟ್ 02 (ಕರ್ನಾಟಕ ವಾರ್ತೆ) : ಹಿಂದುಳಿದ  ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ  2025-26ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ / ಅರೆಅಲೆಮಾರಿ ವಿದ್ಯಾರ್ಥಿಗಳಿಂದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ – ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ  ಆನ್‍ ಲೈನ್‍ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://ssp.postmatric.karnataka.gov.in ನಲ್ಲಿ  ಸೆಪ್ಟೆಂಬರ್ 30 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

 ಕಾರ್ಯಕ್ರಮದ  ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ  ಆದೇಶಗಳ ಬಗ್ಗೆ ಮಾಹಿತಿಗಾಗಿ  ವೆಬ್‍ ಸೈಟ್  https://bcwd.karnataka.gov.in  ಗೆ ಭೇಟಿ ನೀಡಬಹುದು. ಇಲಾಖೆಯ ಸಹಾಯವಾಣಿ ದೂರವಾಣಿ ಸಂಖ್ಯೆ : 8050770005, ಇ-ಮೇಲ್  bcwdhelpline@gmail.com ಅಥವಾ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇ-ಮೇಲ್  postmatrichelp@karnatak.gov.in  ಅಥವಾ  ಉಪ ನಿರ್ದೇಶಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ನಗರ ಜಿಲ್ಲೆ, 1ನೇ ಮಹಡಿ, ಪೋಡಿಯಂ ಬ್ಲಾಕ್, ವಿವಿ ಟವರ್, ಅಂಬೇಡ್ಕರ್  ವೀದಿ ಬೆಂಗಳೂರು-01 ಅಥವಾ ದೂರವಾಣಿ ಸಂಖ್ಯೆ 080-22867628 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";