ಬೆಂಗಳೂರು, ಆಗಸ್ಟ್ 11 (ಕರ್ನಾಟಕ ವಾರ್ತೆ) : ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಪೌಷ್ಟಿಕ ಆಹಾರಗಳನ್ನು ವಿತರಣೆ ಮಾಡುವ ಸಲುವಾಗಿ Face Recoganiser ಮಾಡಲಾಗುತ್ತಿದೆ. ಇದರಿಂದ ಯಾವುದೇ ಸಮಸ್ಯೆ ಉದ್ಬವಿಸಿಲ್ಲ ಎಂದು ಮಹಿಳ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಸಚಿವೆ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಕಲಾಪದ ವೇಳೆ ವಿಧಾನ ಪರಿಷತ್ತಿನ ಸದಸ್ಯ ಗೋವಿಂದರಾಜು ಅವರ ಶೂನ್ಯ ವೇಳೆಯ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ಮಕ್ಕಳಿಗೆ ಹಾಗೂ ಬಾಣಂತಿಯರಿಗೆ ಆಹಾರ ವಿತರಣೆಯಲ್ಲಿ ಪಾರದರ್ಶಕತೆ ತರಲು Face Recoganiser ಮಾಡಲಾಗುತ್ತಿದೆ. ಇದರಿಂದ ಅವ್ಯವಹಾರಗಳ ತಡೆಗೆ ಕ್ರಮ ವಹಿಸಲಾಗಿದೆ. ನಿಖರವಾದ ಫಲಾನುಭವಿಗಳಿಗೆ ಮಾತ್ರ ಆಹಾರ ಧಾನ್ಯಗಳನ್ನು ವಿತರಿಸಲಾಗುತ್ತಿದೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಈಗಾಗಲೇ ಹೊಸ ಮೊಬೈಲ್ ಗಳನ್ನು ಸಹ ನೀಡಲಾಗಿದೆ. ಅಲ್ಲದೇ ಈ ಬಾರಿ ಚುನಾವಣಾ ಕಾರ್ಯಗಳಿಗೆ ನಿಯೋಜಿಸುವುದರಿಂದ ವಿನಾಯತಿ ನೀಡುವಂತೆ ಕೋರಲಾಗುವುದು ಎಂದು ತಿಳಿಸಿದರು.