ಬೆಂಗಳೂರು, ಆಗಸ್ಟ್ 18, (ಕರ್ನಾಟಕ ವಾರ್ತೆ) : ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳಲ್ಲಿ ಹೃದಯಘಾತಗಳ ಬಗ್ಗೆ ಪ್ರಕಟವಾಗುತ್ತಿದ್ದು, ಈ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಸಂಬಂಧ ಪ್ರಚಾರ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಸಹ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೃದಯಾಘಾತ ಪ್ರಕರಣಗಳು ಅಧಿಸೂಚಿತ ರೋಗ ಎಂದು ಘೋಷಣೆಯಾಗದೆ ಇರುವುದರಿಂದ ಹೃದಯಾಘಾತ ಪ್ರಕರಣಗಳ ನಿಖರವಾದ ಮಾಹಿತಿ ಲಭ್ಯವಿರುವುದಿಲ್ಲ. ಆದರೆ, ಹಠಾತ್ ಹೃದಯಾಘಾತವನ್ನು ತಡೆಯಲು ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ಮಾರ್ಚ್ 2023 ರಿಂದ ಪ್ರಾರಂಭಿಸಲಾಗಿರುತ್ತದೆ.
ಕಳೆದ 03 ವರ್ಷಗಳಲ್ಲಿ ಸಂಭವಿಸಿರುವ ಮರಣಗಳು ತೃತೀಯ ಹಂತದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ಹಂತದಲ್ಲಿ ಮತ್ತು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಎಲ್ಲಾ ಮರಣಗಳು Spokes & Hub ನೊಂದಾಯಿಸಲ್ಪಟ್ಟಿರುತ್ತವೆ. ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಕಳೆದೆ 3 ವರ್ಷದಲ್ಲಿ ಹೃದಯಾಘಾತ ಸಂಭವಿಸಿರುವ ಪ್ರಕರಣಗಳ ಸಂಖ್ಯೆ 61299 ಇದರಲ್ಲಿ 45 ವರ್ಷಕ್ಕಿಂತ ಕಡಿಮೆ ವಯೆಸ್ಸಿನವರಲ್ಲಿ ಹೃದಯಾಘಾತದಿಂದ ಮೃತಪಟ್ಟವರ ಸಂಖ್ಯೆ 472 ಎಂದು ವೈದಕೀಯ ಶಿಕ್ಷಣ ಇಲಾಖೆಯು ತಿಳಿಸಿದೆ.
ರಾಜ್ಯದ ಯುವ ಸಮುದಾಯದಲ್ಲಿ ತೀವ್ರ ಹೃದಯಾಘಾತದಿಂದ ಮರಣ ಪ್ರಕರಣಗಳು ವರದಿಯಾಗುತ್ತಿದ್ದು, ಈ ಬಗ್ಗೆ ಅಧ್ಯಯನ ನಡೆಸಲು ಡಾ|| ಕೆ.ಎಸ್. ರವೀಂದ್ರನಾಥ್, ನಿರ್ದೇಶಕರು, ಶ್ರೀ ಜಯದೇವ ಹೃದ್ರೋಗ ಸಂಸ್ಥೆ, ಬೆಂಗಳೂರು ಇವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿಯು ಹೃದಯಾಘಾತ / ತೀವ್ರ ಹೃದಯಾಘಾತ ಪ್ರಕರಣಗಳಲ್ಲಿ ಶೇಕಡಾ 75% ಕ್ಕಿಂತ ಹೆಚ್ಚು ಜನರು ಒಂದಕ್ಕಿಂತ ಒಂದಕ್ಕಿಂತ ಹೆಚ್ಚು ಹೃದಯದ ಅಪಾಯಕಾರಿ ಅಂಶವನ್ನು ಹೊಂದಿದ್ದಾರೆ. ಅದರಲ್ಲಿ ಮುಖ್ಯವಾಗಿ ದೈಹಿಕ ಚಟುವಟಿಕೆಯಗಳಲ್ಲಿ ತೊಡಗದೆ ಇರುವುದು (ಜೀವನ ಶೈಲಿ ಬದಲಾವಣೆ), ಅನಾರೋಗ್ಯಕರ ಆಹಾರ ಪದ್ದತಿ, ಮಾನಸಿಕ ಒತ್ತಡ, ಅತಿಯಾದ ದೇಹದ ತೂಕ ಅಥವಾ ಬೊಜ್ಜುತನ, ಅತಿಯಾದ ಮದಪಾನ, ಮಧುಮೇಹ, ಧೂಮಪಾನ, ಅಧಿಕ ರಕ್ತದೊತ್ತಡ, ಕುಟುಂಬದ ಹೃದ್ರೋಗದ ಹಿನ್ನೆಲೆ ಹೊಂದಿರುತ್ತಾರೆ ಎಂದು ವರದಿಯಲ್ಲಿ ತಿಳಿಸಿದೆ.
ಹೃದಯ ಆರೋಗ್ಯ ಕಣ್ಗಾವಲು ಮೂಲಕ ಆಸ್ಪತ್ರೆಯ ಹೊರಗಿನ ಹಠಾತ್ ಸಾವುಗಳಿಗೆ ಕಡ್ಡಾಯ ಶವ ಪರೀಕ್ಷೆಗಳನ್ನು ನಡೆಸಲು ಕ್ರಮಕೈಗೊಳ್ಳುವುದು. ತ್ವರಿತ ಹೃದಯ ಚಿಕಿತ್ಸಾ ವ್ಯವಸ್ಥೆಯನ್ನು ಬಲಪಡಿಸುವ ಸಲುವಾಗಿ ECG ಯಂತ್ರಗಳು, CPR ತರಬೇತಿ, ಸಾರ್ವಜನಿಕ ಸ್ಥಳಗಳಲ್ಲಿ AED ಗಳ ಸ್ಥಾಪನೆಗೆ ಕ್ರಮಕೈಗೊಳ್ಳುವುದು.ವಾಹನ ಚಾಲಕರಂತಹ ಅಪಾಯದ ಗುಂಪುಗಳಿಗೆ ಹೃದಯ ಕಾಯಿಲೆ ಬಗ್ಗೆ ಆರೋಗ್ಯ ತಪಾಸಣೆಗಳನ್ನು ಹಾಗೂ ಜನಜಾಗೃತಿ ಅಭಿಯಾನಗಳನ್ನು ಆರಂಭಿಸಲು ಕ್ರಮಕೈಗೊಳ್ಳುವುದು. ಹೃದಯ ಆರೋಗ್ಯದ ಬಗ್ಗೆ ರಾಜ್ಯ ಮಟ್ಟದಲ್ಲಿ ಸಮಗ್ರ ಮತ್ತು ತ್ವರಿತ ಕ್ರಮ ತೆಗೆದುಕೊಳ್ಳಬೇಕೆಂದು ಶಿಫಾರಸ್ಸನ್ನು ಮಾಡಿರುತ್ತದೆ.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿಯಲ್ಲಿನ ಜಿಲ್ಲಾ ಆಸ್ಪತ್ರೆ ಮತ್ತು ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ಹೃದಯಾಘಾತ ಸಂಭವಿಸಿದಾಗ – ತುರ್ತು ಚಿಕಿತ್ಸೆ ನೀಡಲು ಅಗತ್ಯ ಔಷಧಿಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ತೀವ್ರ ಹೃದಯಾಘಾತ ಸಂಭವಿಸಿದಾಗ ಕೊರೊನರಿ ಸ್ಟಂಟ್ ಮತ್ತು ಕಾರ್ಡಿಯಕ್ ಬೈಪಾಸ್ ಸರ್ಜರಿಗಳಿಗೆ ಸೂಪರ್ ಸ್ಪೇಷಾಲಿಟಿ ತಜ್ಞರ ಅವಶ್ಯಕತೆ ಇರುವುದರಿಂದ ಸದರಿ ಚಿಕಿತ್ಸೆಗಾಗಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ (SAST) ನೊಂದಣಿ ಹೊಂದಿರುವ ತೃತೀಯ ಹಂತದ ಆಸ್ಪತ್ರೆಗಳಿಗೆ ಕಳುಹಿಸಿಕೊಡುವ ಕ್ರಮವಹಿಸಲಾಗಿರುತ್ತದೆ.
ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಬೆಂಗಳೂರು, ಮೈಸೂರು, ಕಲಬುರ್ಗಿ ಶಾಖೆಗಳಲ್ಲಿ ಹೃದಯಾಘಾತ ಸಂಭವಿಸಿದಾಗ ಕೊರೊನರಿ ಸ್ಟಂಟ್ ಮತ್ತು ಕಾರ್ಡಿಯಾಕ್ ಬೈಪಾಸ್ ಸರ್ಜರಿಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಮತ್ತು ಹೃದಯ ತ್ತು ಸ್ತಂಭನ ಪ್ರಕರಣಗಳಿಗೆ ಸಾರ್ವಜನಿಕರಲ್ಲಿ ಜಾಗೃತಿ – ಮೂಡಿಸಲು ಗೃಹ ಆರೋಗ್ಯ ಯೋಜನೆ ಮೂಲಕ ಅಸಾಂಕ್ರಾಮಿಕ ರೋಗಗಳನ್ನು ಪತ್ತೆ ಹಚ್ಚಲು ಮತ್ತು ಹೃದಯಾಘಾತಕ್ಕೆ ಕಾರಣವಾದ ಅಪಾಯಕಾರಿ ಅಂಶಗಳನ್ನು ಪತ್ತೆ ಮಾಡಲು 30 ವರ್ಷ ಮೇಲ್ಪಟ್ಟವರಿಗೆ ತಪಾಸಣೆ ಮಾಡಲು ಕ್ರಮವಹಿಸಲಾಗಿರುತ್ತದೆ.
ಡಾ. ಪುನೀತ್ ರಾಜ್ಕುಮಾರ್ ಹೃದಯ ಜ್ಯೋತಿ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆ, ತಾಲ್ಲೂಕು ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ವಿಸ್ತರಿಸಲು ಕ್ರಮ ವಹಿಸಲಾಗುತ್ತಿದೆ. ಶಾಲೆಗಳಲ್ಲಿ, ಜಿಮ್ಗಳಲ್ಲಿ ಸಂಸ್ಥೆಗಳಲ್ಲಿ, ಸಾರ್ವಜನಿಕರಿಗೆ ಸಿ.ಪಿ.ಆರ್ ತರಬೇತಿ, ಜನಜಾಗೃತಿ ಹಾಗೂ ಆರೋಗ್ಯ ತಪಾಸಣೆ ಶಿಬಿರಗಳನ್ನು ಹಮ್ಮಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಚಿವರು ತಿಳಿಸಿದರು.