ಬೆಂಗಳೂರು, ಆಗಸ್ಟ್ 18, (ಕರ್ನಾಟಕ ವಾರ್ತೆ) : ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿನ ಸಿಂದನೂರು ತಾಲ್ಲೂಕಿನ ರೈತರ ಪಂಪ್ ಸೆಟ್ಟುಗಳಿಗೆ ನಿರಂತರವಾಗಿ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಭತ್ತ ನಾಟಿ ಸಮಯದಲ್ಲಿ 10 ಗಂಟೆಗಳ ಕಾಲ ವಿದ್ಯುತ್ ಪೂರೈಸಲು ರೈತರು ಮನವಿ ಸಲ್ಲಿಸಿದಲ್ಲಿ ವಿದ್ಯುತ್ ನಿಗಮದವರೊಂದಿಗೆ ಪರಿಶೀಲಿಸಿ ಅಗತ್ಯ ಕ್ರಮ ವಹಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ತಿಳಿಸಿದರು.
ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಬಸನಗೌಡ ಬಾದರ್ಲಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿನ ಸಿಂಧನೂರು ತಾಲ್ಲೂಕಿನ ರೈತರ ಪಂಪ್‌ಸೆಟ್ಟುಗಳಿಗೆ ನಿರಂತರವಾಗಿ 7 ಗಂಟೆಗಳ ಕಾಲ 3-ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ. ಜೆಸ್ಕಾಂ ವ್ಯಾಪ್ತಿಯಲ್ಲಿ ಸಿಂಧನೂರು ತಾಲ್ಲೂಕು ವಿದ್ಯುತ್ ಉಪ-ವಿಭಾಗಕ್ಕೆ ಕ್ರೇನ್ ಒದಗಿಸುವ ಪ್ರಸ್ತಾವನೆ ಇದ್ದು, ಪರಿಶೀಲನಾ ಹಂತದಲ್ಲಿದೆ ಎಂದು ತಿಳಿಸಿದರು.