ಹಿಂದೂಗಳ ಹಬ್ಬಗಳಲ್ಲಿ ಶ್ರೀ ಗಣೇಶ ಚತುರ್ಥಿಗೆ ವಿಶೇಷ ಸ್ಥಾನವಿದೆ. ಶ್ರೀ ಗಣೇಶ ಚತುರ್ಥಿಯ ದಿನದಂದು ಮತ್ತು ಈ ಹಬ್ಬದ ಇತರ ದಿನಗಳಂದು ಶ್ರೀ ಗಣೇಶತತ್ತ್ವವು ಇತರ ದಿನಗಳ ತುಲನೆಯಲ್ಲಿ ೧೦೦೦ ಪಟ್ಟು ಹೆಚ್ಚು ಕಾರ್ಯರತವಾಗಿರುತ್ತದೆ. ಇಂತಹ ಸಮಯದಲ್ಲಿ ಶ್ರೀ ಗಣಪತಿಯ ಉಪಾಸನೆಯನ್ನು ಮಾಡುವುದರಿಂದ ಆಧ್ಯಾತ್ಮಿಕ ಸ್ತರದಲ್ಲಿ ಗಣೇಶತತ್ತ್ವದ ಹೆಚ್ಚು ಲಾಭವಾಗುತ್ತದೆ.
ಗಣೇಶಭಕ್ತರಿಗೆ ವಿಘ್ನಹರ್ತಾ, ಸಿದ್ಧಿದಾತಾ ಮತ್ತು ಅಷ್ಟ ದಿಕ್ಕುಗಳ ಅಧಿಪತಿಯಾದ ಶ್ರೀ ಗಣೇಶನ ಭಾವಪೂರ್ಣ ಪೂಜೆಯನ್ನು ಮಾಡಿ ಅವನ ಆಶೀರ್ವಾದವನ್ನು ಪಡೆಯುವ ಹಂಬಲ ಸದಾ ಇರುತ್ತದೆ. ‘ಗಣೇಶಭಕ್ತರು ಗಣೇಶಪೂಜೆಯನ್ನು ಭಾವಪೂರ್ಣವಾಗಿ ಮಾಡುವಂತಾಗಲಿ, ಮತ್ತು ಅವರ ಮೇಲೆ ಗಣಪತಿಯ ಕೃಪೆಯಾಗಲಿ’ ಎಂಬ ಉದ್ದೇಶದಿಂದ ಶ್ರೀ ಗಣೇಶ ಚತುರ್ಥಿಯನ್ನು ಶಾಸ್ತ್ರೀಯವಾಗಿ ಹೇಗೆ ಆಚರಿಸಬೇಕು ಎಂಬ ಮಾರ್ಗದರ್ಶನವನ್ನು ಮುಂದಿನ ಲೇಖನದ ಮೂಲಕ ನೀಡಲಾಗಿದೆ.
ಗಣೇಶನ ಪೂಜೆಯಲ್ಲಿ ದೂರ್ವೆಗೆ ವಿಶೇಷ ಮಹತ್ವವಿದೆ. ದೂಃಅವಮ್ ಹೀಗೆ ದೂರ್ವೆ ಈ ಶಬ್ದವು ನಿರ್ಮಾಣವಾಗಿದೆ. ‘ದೂಃ’ ಅಂದರೆ ದೂರದಲ್ಲಿ ಇರುವುದು ಮತ್ತು ‘ಅವಮ್’ ಅಂದರೆ ಯಾವುದು ಹತ್ತಿರ ತರುತ್ತದೆಯೋ ಅದು. ದೂರದಲ್ಲಿರುವ ಶ್ರೀ ಗಣೇಶನ ಪವಿತ್ರಕಗಳನ್ನು ಯಾವುದು ಹತ್ತಿರ ತರುತ್ತದೆಯೋ, ಅದುವೇ ದೂರ್ವೆ ಆಗಿದೆ.
ಶ್ರೀ ಗಣಪತಿಗೆ ದೂರ್ವೆಯನ್ನು ಅರ್ಪಿಸುವುದರ ಕಾರಣಗಳು
ಪೌರಾಣಿಕ ಕಾರಣ : ಗಣಪತಿಯು ತನ್ನನ್ನು ಮದುವೆಯಾಗಬೇಕೆಂದು ಓರ್ವ ಅಪ್ಸರೆಯು ಧ್ಯಾನಮಗ್ನನಾಗಿದ್ದ ಗಣಪತಿಯ ಧ್ಯಾನಭಂಗ ಮಾಡಿದಳು. ಗಣಪತಿಯು ವಿವಾಹಕ್ಕೆ ನಿರಾಕರಿಸಿದ್ದರಿಂದ ಅಪ್ಸರೆಯು ಗಣಪತಿಗೆ ಶಾಪ ಕೊಟ್ಟಳು. ಇದರಿಂದ ಗಣಪತಿಯ ತಲೆಗೆ ದಾಹವಾಗತೊಡಗಿತು. ಈ ದಾಹವನ್ನು ಕಡಿಮೆ ಮಾಡಿಕೊಳ್ಳಲು ಗಣಪತಿಯು ತಲೆಯ ಮೇಲೆ ದೂರ್ವೆಗಳನ್ನು ಧರಿಸಿದನು. ಈ ಕಾರಣಕ್ಕಾಗಿ ಗಣಪತಿಗೆ ದೂರ್ವೆಗಳನ್ನು ಅರ್ಪಿಸುತ್ತಾರೆ.’
ಆಯುರ್ವೇದಕ್ಕನುಸಾರ ಕಾರಣ : ಆಯುರ್ವೇದವು ಸಹ ‘ದೂರ್ವೆಯ ರಸದಿಂದ ಶರೀರದ ಉಷ್ಣತೆಯು ಕಡಿಮೆಯಾಗುತ್ತದೆ’ ಎಂದು ಹೇಳುತ್ತದೆ.
ಆಧ್ಯಾತ್ಮಿಕ ಕಾರಣ : ನಾವು ಪೂಜಿಸುವ ಮೂರ್ತಿಯಲ್ಲಿ ದೇವತ್ವವು ಹೆಚ್ಚಿಗೆ ಬಂದು ನಮಗೆ ಚೈತನ್ಯದ ಲಾಭವಾಗಬೇಕು ಎಂಬುದು ಪೂಜೆಯ ಒಂದು ಉದ್ದೇಶವಾಗಿರುತ್ತದೆ. ಆದುದರಿಂದ ಆಯಾಯ ದೇವತೆಗಳ ತತ್ತ್ವವನ್ನು ಹೆಚ್ಚೆಚ್ಚು ಆಕರ್ಷಿಸುವಂತಹ ವಸ್ತುಗಳನ್ನು ದೇವತೆಗಳಿಗೆ ಅರ್ಪಿಸುವುದು ಸೂಕ್ತವಾಗಿದೆ. ದೂರ್ವೆಯಲ್ಲಿ ಗಣೇಶತತ್ತ್ವವನ್ನು ಆಕರ್ಷಿಸುವ ಕ್ಷಮತೆಯು ಎಲ್ಲಕ್ಕಿಂತ ಹೆಚ್ಚಿಗೆ ಇರುವುದರಿಂದ ಗಣಪತಿಗೆ ದೂರ್ವೆಗಳನ್ನು ಅರ್ಪಿಸುತ್ತಾರೆ.
ದೂರ್ವೆ ಹೇಗಿರಬೇಕು ?
ಗಣಪತಿಗೆ ಎಳೆಯ ದೂರ್ವೆಗಳನ್ನು ಅರ್ಪಿಸಬೇಕು. ಎಳೆಯ ದೂರ್ವೆಗೆ ‘ಬಾಲತೃಣಮ್’ ಎನ್ನುತ್ತಾರೆ. ಬಲಿತಿರುವ ದೂರ್ವೆಯು ಒಂದು ರೀತಿಯ ಹುಲ್ಲಿನಂತೆಯೇ ಇರುತ್ತದೆ. ದೂರ್ವೆಗಳಿಗೆ ೩, ೫, ೭ ಹೀಗೆ ಬೆಸ ಸಂಖ್ಯೆಯ ಗರಿಗಳಿರಬೇಕು.
ದೂರ್ವೆಯು ಎಷ್ಟು ಉದ್ದವಾಗಿರಬೇಕು ?
ಮೊದಲು ಗಣಪತಿಯ ಮೂರ್ತಿಯು ಸುಮಾರು ಒಂದು ಮೀಟರಿನಷ್ಟು ಎತ್ತರವಾಗಿರುತ್ತಿತ್ತು. ಆದುದರಿಂದ ಸಮಿತ್ತಿನಷ್ಟು ಉದ್ದದ ದೂರ್ವೆಗಳನ್ನು ಅರ್ಪಿಸುತ್ತಿದ್ದರು. ಮೂರ್ತಿಯೇ ಸಮಿತ್ತುಗಳ ಆಕಾರದಷ್ಟು ಇದ್ದರೆ ಚಿಕ್ಕ ಆಕಾರದ ದೂರ್ವೆಗಳನ್ನು ಅರ್ಪಿಸಬೇಕು; ಮತ್ತು ಮೂರ್ತಿಯು ತುಂಬಾ ದೊಡ್ಡದಾಗಿದ್ದರೂ ಸಮಿತ್ತಿನ ಆಕಾರದ ದೂರ್ವೆಗಳನ್ನೇ ಅರ್ಪಿಸಬೇಕು. ಸಮಿತ್ತುಗಳನ್ನು ಒಟ್ಟಿಗೆ ಕಟ್ಟುವಂತೆ ದೂರ್ವೆಗಳನ್ನೂ ಒಟ್ಟಿಗೆ ಕಟ್ಟುತ್ತಾರೆ. ದೂರ್ವೆಗಳನ್ನು ಒಟ್ಟಿಗೆ ಕಟ್ಟುವುದರಿಂದ ಅವುಗಳ ಸುಗಂಧವು ಹೆಚ್ಚು ಸಮಯ ಉಳಿಯುತ್ತದೆ. ಅವು ಹೆಚ್ಚು ಸಮಯ ತಾಜಾ ಆಗಿರಬೇಕೆಂದು ಅವುಗಳನ್ನು ನೀರಿನಲ್ಲಿ ಅದ್ದಿ ಅರ್ಪಿಸುತ್ತಾರೆ. ಇವುಗಳಿಂದ ಗಣಪತಿಯ ಪವಿತ್ರಕಗಳು ಹೆಚ್ಚು ಕಾಲ ಮೂರ್ತಿಯಲ್ಲಿ ಉಳಿಯುತ್ತವೆ.
ದೂರ್ವೆಗಳ ಸಂಖ್ಯೆ ಎಷ್ಟಿರಬೇಕು ?
ಬೆಸ ಸಂಖ್ಯೆಗಳು ಶಕ್ತಿಗೆ ಸಂಬಂಧಿಸಿರುತ್ತವೆ. ದೂರ್ವೆಗಳನ್ನು ಹೆಚ್ಚಾಗಿ ಬೆಸ ಸಂಖ್ಯೆಗಳಲ್ಲಿ ಅರ್ಪಿಸುತ್ತಾರೆ. ಬೆಸ ಸಂಖ್ಯೆಗಳಿಂದ ಮೂರ್ತಿಯಲ್ಲಿ ಶಕ್ತಿಯು ಹೆಚ್ಚು ಪ್ರಮಾಣದಲ್ಲಿ ಬರುತ್ತದೆ. ಗಣಪತಿಗೆ ವಿಶೇಷವಾಗಿ ೨೧ ದೂರ್ವೆಗಳನ್ನು ಅರ್ಪಿಸುತ್ತಾರೆ. ೨೧ ಈ ಸಂಖ್ಯೆಯು ಸಂಖ್ಯಾಶಾಸ್ತ್ರಕ್ಕನುಸಾರ ೨ + ೧=೩ ಹೀಗೆ ಆಗಿದೆ. ಶ್ರೀ ಗಣಪತಿಯು ‘೩’ ಈ ಸಂಖ್ಯೆಗೆ ಸಂಬಂಧಿಸಿದ್ದಾನೆ. ‘೩’ ಈ ಸಂಖ್ಯೆಯು ಕರ್ತ, ಧರ್ತದೊಂದಿಗೆ ಹರ್ತವೂ ಆಗಿರುವುದರಿಂದ ಈ ಶಕ್ತಿಯಿಂದ ೩೬೦ ಲಹರಿಗಳನ್ನು ನಾಶ ಮಾಡಲು ಸಾಧ್ಯವಾಗುತ್ತದೆ. ಸಮ ಸಂಖ್ಯೆಗಳಲ್ಲಿ ದೂರ್ವೆಗಳನ್ನು ಅರ್ಪಿಸಿದರೆ ೩೬೦ ಲಹರಿಗಳು ಹೆಚ್ಚಿಗೆ ಆಕರ್ಷಿತವಾಗುತ್ತವೆ ಮತ್ತು ನಂತರ ೧೦೮ ಲಹರಿಗಳೂ ಆಕರ್ಷಿತವಾಗುತ್ತವೆ.
(ಆಧಾರ : ಸನಾತನ ಸಂಸ್ಥೆ ನಿರ್ಮಿಸಿದ ಗ್ರಂಥ “ಶ್ರೀ ಗಣಪತಿ”)
ಸಂಗ್ರಹ ಶ್ರೀ. ವಿನೋದ ಕಾಮತ್, ರಾಜ್ಯ ವಕ್ತಾರರು, ಸನಾತನ ಸಂಸ್ಥೆ
(ಸಂಪರ್ಕ : ೯೩೪೨೫೯೯೨೯೯)
Veekay News > Feature Article > ಶ್ರೀ ಗಣೇಶನ ಪೂಜೆಯಲ್ಲಿ ಉಪಯೋಗಿಸುವ ವಿಶಿಷ್ಟ ವಸ್ತು – ದೂರ್ವೆ
ಶ್ರೀ ಗಣೇಶನ ಪೂಜೆಯಲ್ಲಿ ಉಪಯೋಗಿಸುವ ವಿಶಿಷ್ಟ ವಸ್ತು – ದೂರ್ವೆ
ವೀ ಕೇ ನ್ಯೂಸ್25/08/2025
posted on

the authorವೀ ಕೇ ನ್ಯೂಸ್
All posts byವೀ ಕೇ ನ್ಯೂಸ್
Leave a reply
Related News
ಮಹಾಭಾರತದ ಪ್ರಧಾನ ತತ್ವವೇ ಧರ್ಮ
21/08/2025
ದಾಸವಾಣಿ ಕಾರ್ಯಕ್ರಮ
19/08/2025
ಶ್ರೀಕೃಷ್ಣನ ವಿವಿಧ ಗುಣವೈಶಿಷ್ಟ್ಯಗಳು
17/08/2025