ಕೆಂಗೇರಿ ಪೊಲೀಸ್ ಠಾಣಾ ಸರಹದ್ದಿನ, ವಿದ್ಯಾಪೀಠ ರಸ್ತೆಯಲ್ಲಿ ವಾಸವಿರುವ ಪರ‍್ಯಾದುದಾರರು ದಿನಾಂಕ:08/08/2025 ರಂದು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ, ಪರ‍್ಯಾದುದಾರರು ವರಮಹಾಲಕ್ಷಿ ಹಬ್ಬದ ಪ್ರಯುಕ್ತ ಪೂಜಾ ಸಾಮಾಗ್ರಿಗಳನ್ನು ಖರೀದಿಸಲು, ಮನೆಯ ಮುಂಭಾಗಿಲಿಗೆ ಬೀಗವನ್ನು ಹಾಕಿಕೊಂಡು ಅಂಗಡಿಗೆ ಹೋಗಿರುತ್ತಾರೆ. ಅಂಗಡಿಯಿAದ ವಾಪಸ್ ಮನೆಗೆ ಬಂದು ನೋಡಲಾಗಿ, ಯಾರೋ ಅಪರಿಚಿತ ವ್ಯಕ್ತಿಗಳು ಮನೆಯ ಡೋರ್ ಲಾಕ್ ಮುರಿದು, ಒಳ ಪ್ರವೇಶಿಸಿ ಕೊಠಡಿಯಲ್ಲಿದ್ದ ಬೀರುವಿನ ಲಾಕ್ ಮುರಿದು ಬೀರುವಿನಲ್ಲಿಟ್ಟಿದ್ದ 55 ಗ್ರಾಂ ಚಿನ್ನಾಭರಣಗಳನ್ನು ಹಾಗೂ ₹ 6,000/- ನಗದನ್ನು ಕಳವು ಮಾಡಿಕೊಂಡು ಹೋಗಿರುತ್ತಾರೆಂದು ತಿಳಿಸಿರುತ್ತಾರೆ. ಈ ಕುರಿತು ಕೆಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆಯನ್ನು ಮುಂದುವರೆಸಿದ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆ ಕೈಗೊಂಡು, ಬಾತ್ಮೀಧಾರರಿಂದ ಖಚಿತ ಮಾಹಿತಿಯನ್ನು ಕಲೆಹಾಕಿ, ದಿನಾಂಕ:18/08/2025 ರಂದು ತಮಿಳುನಾಡಿದ ಉಕ್ಕಡಂನಲ್ಲಿ ಓರ್ವ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ವಶಕ್ಕೆ ಪಡೆದ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣದಲ್ಲಿ ಚಿನ್ನಾಭರಣಗಳನ್ನು ಕಳವು ಮಾಡಿರುವುದಾಗಿ ತಪ್ಪೊಪ್ಪಿಕೊಂಡಿರುತ್ತಾನೆ.
ದಿನಾಂಕ:19/08/2025 ರಂದು ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, 9 ದಿನಗಳ ಕಾಲ ಪೊಲೀಸ್ ಅಭಿರಕ್ಷೆಗೆ ಪಡೆದುಕೊಳ್ಳಲಾಯಿತು.
ಪೊಲೀಸ್ ಅಭಿರಕ್ಷೆಗೆ ಪಡೆದ ಆರೋಪಿಯನ್ನು ಸುದೀರ್ಘವಾಗಿ ವಿಚಾರಣೆಗೊಳಪಡಿಸಲಾಗಿ, ಈ ಪ್ರಕರಣವಲ್ಲದೆ ಬಂಡೆಪಾಳ್ಯ ಮತ್ತು ರಾಜಾಜಿನಗರದ ಮತ್ತೆರಡು ಮನೆಗಳಲ್ಲಿ ಕಳವು ಮಾಡಿರುವುದಾಗಿ ತಿಳಿಸಿರುತ್ತಾನೆ. ಹಾಗೂ ಕಳವು ಮಾಡಿದ ಚಿನ್ನಾಭರಣಗಳನ್ನು ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಜ್ಯೂವೆಲರಿ ಅಂಗಡಿಯಲ್ಲಿ ಮಾರಾಟ ಮಾಡಿರುವುದಾಗಿ ತಿಳಿಸಿದ್ದು, ದಿನಾಂಕ:23/08/2025 ರಂದು 100 ಗ್ರಾಂ ಚಿನ್ನಾಭರಣವನ್ನು ಜ್ಯೂವೆಲರಿ ಅಂಗಡಿಯಿAದ ವಶಪಡಿಸಿಕೊಳ್ಳಲಾಗಿರುತ್ತದೆ. ಇವುಗಳ ಮೌಲ್ಯ ₹ 10,00,000/-(ಹತ್ತು ಲಕ್ಷ ರೂಪಾಯಿ).
ಈ ಆರೋಪಿಯ ಬಂಧನದಿ0ದ, 1) ಕೆಂಗೇರಿ ಪೊಲೀಸ್ ಠಾಣೆಯ-02 ಮನೆ ಕನ್ನ ಕಳವು ಪ್ರಕರಣಗಳು, 2) ರಾಜಾಜಿನಗರ ಪೊಲೀಸ್ ಠಾಣೆಯ-01 ಮನೆ ಕನ್ನ ಕಳವು ಪ್ರಕರಣ, 3) ಬಂಡೇಪಾಳ್ಯ ಪೊಲೀಸ್ ಠಾಣೆಯ-01 ಮನೆ ಕನ್ನ ಕಳವು ಪ್ರಕರಣ ಸೇರಿದಂತೆ ಒಟ್ಟು 4 ಕನ್ನ ಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ದಿನಾಂಕ:25/08/2025 ರಂದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿರುತ್ತದೆ. ಈ ಪ್ರಕರಣವನ್ನು ಬೆಂಗಳೂರು ನಗರ, ನೈಋತ್ಯ ವಿಭಾಗದ ಉಪ-ಪೊಲೀಸ್ ಕಮೀಷನರ್ ಶ್ರೀಮತಿ ಅನಿತಾ ಬಿ ಹದ್ದಣವರ್ ಐಪಿಎಸ್ ರವರ ಮಾರ್ಗದರ್ಶನದಲ್ಲಿ, ಹಾಗೂ ಕೆಂಗೇರಿ ಉಪ-ವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀ ಬಸವರಾಜ ಎ ತೇಲಿ ರವರ ನೇತೃತ್ವದಲ್ಲಿ, ಕೆಂಗೇರಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ ಜಗದೀಶ್ ಎನ್ ಹಾಗೂ ಇತರೆ ಅಧಿಕಾರಿ/ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆಮಾಡುವಲ್ಲಿ ಯಶಸ್ವಿಯಾಗಿರುತ್ತಾರೆ.