Live Stream

[ytplayer id=’22727′]

| Latest Version 8.0.1 |

State News

BIG NEWS : ಮೈಸೂರಿಗೆ ಆಗಮಿಸಿದ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮು

BIG NEWS : ಮೈಸೂರಿಗೆ ಆಗಮಿಸಿದ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮು

ಮೈಸೂರಿಗೆ ಆಗಮಿಸಿದ ರಾಷ್ಟಪತಿ ಶ್ರೀಮತಿ ದ್ರೌಪದಿ ಮುರ್ಮು : ಆತ್ಮೀಯವಾಗಿ ಸ್ವಾಗತಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಮೈಸೂರು / ಬೆಂಗಳೂರು :
 ಎರಡು ದಿನಗಳ ಮೈಸೂರು ಭೇಟಿಗಾಗಿ ಇಂದು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಅವರು ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ರಾಷ್ಟ್ರಪತಿಗಳನ್ನು ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆತ್ಮೀಯವಾಗಿ ಸ್ವಾಗತಿಸಿದರು.
ಈ ಸಮಯದಲ್ಲಿ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ರಾಜ್ಯ ಸಚಿವರಾದ ಅನುಪ್ರಿಯಾ ಪಟೇಲ್, ಮೈಸೂರಿನ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿ ಕಾಂತ ರೆಡ್ಡಿ, ಸರ್ಕಾರದ ‌ಅಪರ ಮುಖ್ಯ ‌ಕಾರ್ಯದರ್ಶಿ ಗೌರವಗುಪ್ತ, ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

ವೀ ಕೇ ನ್ಯೂಸ್
";