Live Stream

[ytplayer id=’22727′]

| Latest Version 8.0.1 |

Bengaluru Urban

*ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ*

*ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ*

*ಬೆಂಗಳೂರು, ಸೆಪ್ಟೆಂಬರ್‌ 13*ಬೆಂಗಳೂರಿನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ ಭಾಗಿಯಾದರು.

ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸ್ಪೀಕರ್‌ ಓಂ ಬಿರ್ಲಾ ಅವರನ್ನು ಸಂಸದ ಡಾ.ಕೆ.ಸುಧಾಕರ್‌ ಬರಮಾಡಿಕೊಂಡರು. ಸ್ಪೀಕರ್‌ ಓಂ ಬಿರ್ಲಾ ಅವರಿಗೆ ಮೈಸೂರು ಪೇಟ ಧರಿಸುವ ಮೂಲಕ ಸಂಸದ ಡಾ.ಕೆ.ಸುಧಾಕರ್‌ ಸ್ವಾಗತ ಕೋರಿದರು.

ನಂತರ ಶುಕ್ರವಾರ ರಾತ್ರಿ ನಡೆದ ವಿಶೇಷ ಔತಣಕೂಟದಲ್ಲಿ ಅವರು ಭಾಗಿಯಾದರು.

ಶನಿವಾರ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು
ರಾಜಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾದರು.

“ಅದು ಸಣ್ಣ ಗ್ರಾಮ ಪಂಚಾಯಿತಿ ಇರಲಿ ಅಥವಾ ನಮ್ಮ ದೇಶದ ಪ್ರಜಾಪ್ರಭುತ್ವದ ಅತ್ಯಂತ ದೊಡ್ಡ ದೇಗುಲವಾದ ಸಂಸತ್ ಇರಲಿ, ಅದು ಜನಸಾಮಾನ್ಯರ ದನಿಗೆ ವೇದಿಕೆಯಾಗಬೇಕು, ಸಮಾಜದ ಕಟ್ಟಕಡೆಯ ವ್ಯಕ್ತಿಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಶಕ್ತಿ ಪೀಠವಾಗಬೇಕು” ಎಂದು ಸಂಸದ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ವೀ ಕೇ ನ್ಯೂಸ್
";