ಶಿಕಾರಿಪುರ: (Shikaripura) ನಮ್ಮ ನಾಡಿದ ಹೆಸರು ಕರ್ನಾಟಕವಾಗಿದೆ. ಕನ್ನಡವು (Kannada Language) ನಮ್ಮೆಲ್ಲರ ಉಸಿರಾಗಲಿ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರು ಆಶಿಸಿದರು.
ಶಿಕಾರಿಪುರದಲ್ಲಿ ತಾಲ್ಲೂಕು ಆಡಳಿತ ಹಾಗೂ ಕನ್ನಡ ಯುವಕ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನೆರವೇರಿಸಿ, ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾμÉ ನಮ್ಮ ಹೆಗ್ಗುರುತು. ಅದನ್ನು ಹೆಚ್ಚಾಗಿ ಬಳಸಿ, ಉಳಿಸಿ, ಬೆಳೆಸುವ ಮೂಲಕ ನಾವೆಲ್ಲರೂ ಕನ್ನಡಮ್ಮನ ಸೇವೆ ಮಾಡೋಣ ಎಂದು ಅವರು ಕನ್ನಡ ರಾಜ್ಯೋತ್ಸವದ ಶುಭಕೋರಿದರು.
ಈ ಸಂದರ್ಭದಲ್ಲಿ ತಾಲ್ಲೂಕು ದಂಡಾಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಶ್ರೀ ರಘು ಹೆಚ್.ಎಸ್, ವಿವಿಧ ಇಲಾಖೆಗಳ ಅಧಿಕಾರಿಗಳು, ಕನ್ನಡ ಯುವಕ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Veekay News > Districts > Shivamogga > ಕನ್ನಡ ಭಾಷೆ ಹೆಚ್ಚು ಬಳಸಿ ಬೆಳೆಸಲು ವಿಜಯೇಂದ್ರ ಕರೆ
ಕನ್ನಡ ಭಾಷೆ ಹೆಚ್ಚು ಬಳಸಿ ಬೆಳೆಸಲು ವಿಜಯೇಂದ್ರ ಕರೆ
ವೀ ಕೇ ನ್ಯೂಸ್02/11/2025
posted on




















