Live Stream

[ytplayer id=’22727′]

| Latest Version 8.0.1 |

ShivamoggaState News

ಶಿಕಾರಿಪುರ: ಆತ್ಮನಿರ್ಭರ ಭಾರತಕ್ಕಾಗಿ ಏಕತಾ ನಡಿಗೆ

ಶಿಕಾರಿಪುರ: ಆತ್ಮನಿರ್ಭರ ಭಾರತಕ್ಕಾಗಿ ಏಕತಾ ನಡಿಗೆ

ಶಿಕಾರಿಪುರ: ಶಿಕಾರಿಪುರ (Shikaripura) ಭಾರತೀಯ ಜನತಾ ಪಾರ್ಟಿ (Bharathiya Janata Party) ವತಿಯಿಂದ ಇಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಅವರ ನೇತೃತ್ವದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ರಾಷ್ಟ್ರೀಯ ಏಕತಾ ನಡಿಗೆ (Ekatha Nadige) ಯನ್ನು ಹಮ್ಮಿಕೊಳ್ಳಲಾಗಿತ್ತು.


ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150 ನೇ ಜನ್ಮದಿನದ ಅಂಗವಾಗಿ “ಒಂದೇ ಭಾರತ – ಆತ್ಮನಿರ್ಭರ ಭಾರತ” ಘೋಷವಾಕ್ಯದ ಅಡಿಯಲ್ಲಿ ದೇಶಾದ್ಯಂತ ನಡೆಯುತ್ತಿರುವ ಏಕತಾ ನಡಿಗೆಯ ಅಂಗವಾಗಿ ಈ ಕಾರ್ಯಕ್ರಮ ನಡೆಯಿತು. ಶಿಕಾರಿಪುರದ ಬಸವೇಶ್ವರ ಪಾರ್ಕ್ ನ ಹುತಾತ್ಮ ಯೋಧರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು. ದೇಶದ ಏಕತೆ, ಅಖಂಡತೆ ಮತ್ತು ಸಮಗ್ರತೆಗೆ ಅಮೂಲ್ಯ ಕೊಡುಗೆ ನೀಡಿದ ಭಾರತದ ಉಕ್ಕಿನ ಮನುಷ್ಯ ಹಾಗೂ ಪ್ರಥಮ ಗೃಹ ಸಚಿವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಗೌರವ ಸಲ್ಲಿಸಲಾಯಿತು.
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರುಮೂರ್ತಿ, ಜಿಲ್ಲಾಧ್ಯಕ್ಷ ಜಗದೀಶ್, ಮಾಜಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಮಂಡಲ ಅಧ್ಯಕ್ಷ ಹನುಮಂತಪ್ಪ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಶ್ರೀಮತಿ ಗಾಯತ್ರಿ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಸಿದ್ದಲಿಂಗಪ್ಪ ನಿಂಬೆಗೊಂದಿ, ತಾಲ್ಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ರಾಜಶೇಖರ್, ಜಿಲ್ಲಾ ಕಾರ್ಯದರ್ಶಿ ನಿವೇದಿತಾ ರಾಜು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರಶಾಂತ್, ಪುರಸಭಾ ಅಧ್ಯಕ್ಷರಾದ ಶ್ರೀಮತಿ ಸುನಂದಾ ಮಂಜುನಾಥ್, ಉಪಾಧ್ಯಕ್ಷರಾದ ಶ್ರೀಮತಿ ರೂಪಾ ಮಂಜುನಾಥ್, ಪುರಸಭಾ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವೀ ಕೇ ನ್ಯೂಸ್
";