Live Stream

[ytplayer id=’22727′]

| Latest Version 8.0.1 |

Bengaluru UrbanNational NewsWorld News

ಉಪರಾಷ್ಟ್ರಪತಿ ಸಿ.ಸಿ.ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲ ಗೆಹ್ಲೋಟ್ ಅವರಿಂದ ಬೀಳ್ಕೊಡುಗೆ

ಉಪರಾಷ್ಟ್ರಪತಿ ಸಿ.ಸಿ.ರಾಧಾಕೃಷ್ಣನ್ ಅವರಿಗೆ ರಾಜ್ಯಪಾಲ ಗೆಹ್ಲೋಟ್ ಅವರಿಂದ ಬೀಳ್ಕೊಡುಗೆ

ಬೆಂಗಳೂರು, ನವೆಂಬರ್ 09: 
ಕರ್ನಾಟಕ ರಾಜ್ಯದ ಒಂದು ದಿನದ ಪ್ರವಾಸವನ್ನು ಮುಗಿಸಿ, ನವದೆಹಲಿಗೆ ಹಿಂದಿರುಗಲು ಬೆಂಗಳೂರಿನ ಯಲಹಂಕ ಏರ್ ಫೋರ್ಸ್ ಸ್ಟೇಷನ್ ಗೆ ಆಗಮಿಸಿದ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್ ಅವರಿಗೆ ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಆತ್ಮೀಯವಾಗಿ ಬೀಳ್ಕೊಡಲಾಯಿತು.

ಈ ಸಮಯದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಕರ್ನಾಟಕ  ಪೊಲೀಸ್ ಮಹಾ ನಿರ್ದೇಶಕರಾದ ಎಂ.ಎ. ಸಲೀಮ್, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್ ಜಿ, ಸೇರಿದಂತೆ ಇತರೆ ಹಿರಿಯ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಮೇಲುಕೋಟೆಯಲ್ಲಿ ರಾಷ್ಟ್ರಪತಿಗಳೊಂದಿಗೆ ಚೆಲುವರಾಯಸ್ವಾಮಿ ದರ್ಶನ ಪಡೆದ ರಾಜಪಾಲರು
ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಮೇಲುಕೋಟೆಗೆ ಗೌರವಾನ್ವಿತ ರಾಜ್ಯಪಾಲರಾದ  ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಸಿ.ಪಿ ರಾಧಾಕೃಷ್ಣನ್ ಅವರೊಂದಿಗೆ ಭೇಟಿ ನೀಡಿ, ಚೆಲುವರಾಯಸ್ವಾಮಿ ದೇವರ ದರ್ಶನ ಪಡೆದರು.

ಇದೇ ಸಂದರ್ಭದಲ್ಲಿ ಮಾನ್ಯ ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾನ್ಯ ಕೃಷಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ, ಮಾನ್ಯ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ,  ಜಿಲ್ಲಾಧಿಕಾರಿ ಡಾ ಕುಮಾರ,‌ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡಿ ಹಾಗೂ ಇತರರು ಉಪಸ್ಥಿತರಿದ್ದರು.

ವೀ ಕೇ ನ್ಯೂಸ್
";