Live Stream

[ytplayer id=’22727′]

| Latest Version 8.0.1 |

Employment

ಪತ್ರಕರ್ತರಿಗೆ ಕನ್ನಡ ಸಾಹಿತ್ಯದಲ್ಲಿ ಅಧ್ಯಯನ ಶಿಬಿರ

ಬೆಂಗಳೂರು, ಜುಲೈ 10 (ಕರ್ನಾಟಕ ವಾರ್ತೆ): ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ “ಕನ್ನಡ ಸಾಹಿತ್ಯ” ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್ 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತಿಯಿರುವ 20 ರಿಂದ 40 ವರ್ಷ ವಯಸ್ಸುಳ್ಳ ಈಗಾಗಲೇ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವವರು, ಪತ್ರಿಕೋದ್ಯಮ ಪದವಿ ಪಡೆದವರು ಹಾಗೂ ಆಸಕ್ತಿಯುಳ್ಳವರು ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು 2025 ರ ಜುಲೈ 25 ಕೊನೆಯ ದಿನಾಂಕವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಜಾಲತಾಣ https://sahithyaacademy.karnataka.gov.in ನ ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ .ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";