Live Stream

[ytplayer id=’22727′]

| Latest Version 8.0.1 |

State News

ನಂದಿನಿ ಮಿಲ್ಕ್‌ ಪಾರ್ಲರ್‌ನಲ್ಲಿ ಹಾಲಿನ ಜತೆ ಆಲ್ಕೋಹಾಲ್‌ ಮಾರಾಟ!

ನಂದಿನಿ ಮಿಲ್ಕ್‌ ಪಾರ್ಲರ್‌ನಲ್ಲಿ ಹಾಲಿನ ಜತೆ ಆಲ್ಕೋಹಾಲ್‌ ಮಾರಾಟ!

ಮೈಸೂರು: ಜಿಲ್ಲೆಯ ನಂದಿನಿ ಪಾರ್ಲಲ್‌ನಲ್ಲಿ  ಹಾಲಿನ ಜತೆ ಆಲ್ಕೋಹಾಲ್ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ. ಮದ್ಯ ಮಾರಾಟದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಇದಕ್ಕೆ ಭಾರಿ ಟೀಕೆ ವ್ಯಕ್ತವಾಗಿದೆ. ನಂಜನಗೂಡು ತಾಲೂಕಿನ ಹೆಡಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಡಿಯಾಲ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ನಂದಿನಿ ಹಾಲಿನ ಮಳಿಗೆಯಲ್ಲಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.

ರೂಟ್ ನಂಬರ್ 126 ಏಜೆನ್ಸಿ ಸಂಖ್ಯೆ 507ರ ನಂದಿನಿ ಪಾರ್ಲರ್‌ನಲ್ಲಿ ಮದ್ಯ ಮಾರಾಟ ಮಾಡಲಾಗುತ್ತಿದೆ. ರಹಸ್ಯವಾಗಿ ಹಾಲಿನ ಪ್ಯಾಕೆಟ್ ನಡುವೆ ಮದ್ಯದ ಪ್ಯಾಕೆಟ್‌ಗಳನ್ನು ಗ್ರಾಹಕರಿಗೆ ನೀಡುವ ದೃಶ್ಯ ಸ್ಥಳೀಯರ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಪ್ರತಿದಿನ ಬೆಳಗ್ಗೆ 6 ಗಂಟೆಯಿಂದ 10 ಗಂಟೆವರೆಗೆ ಮತ್ತು ಸಂಜೆ 7 ರಿಂದ ರಾತ್ರಿ 10 ಗಂಟೆವರೆಗೆ ಮದ್ಯ ಮಾರಾಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಗ್ರಾಮ ಪಂಚಾಯಿತಿ ಮುಂಭಾಗವೇ ಅಕ್ರಮ ನಡೆಯುತ್ತಿದ್ದರೂ ಅಧಿಕಾರಿಗಳ ಗಮನಕ್ಕೆ ಬಾರದಿರುವುದು ವಿಪರ್ಯಾಸ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ವೀ ಕೇ ನ್ಯೂಸ್
";