Live Stream

[ytplayer id=’22727′]

| Latest Version 8.0.1 |

Education News

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜವಾಹರ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು.

ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು.

ಪ್ರತಿ ಜಿಲ್ಲೆಯಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ, ಉಚಿತ ಶಿಕ್ಷಣ, ಆಹಾರ ಮತ್ತು ವಸತಿ ವ್ಯವಸ್ಥೆ, ವಲಸೆ ಯೋಜನೆಯ ಮೂಲಕ ವೈವಿಧ್ಯಮಯ ಸಾಂಸ್ಕøತಿಕ ವಿನಿಮಯ, ಕ್ರೀಡೆ ಮತ್ತು ಆಟೋಟಗಳಿಗೆ ಉತ್ತೇಜನ ನೀಡಲಾಗುತ್ತಿದೆ. ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ಎನ್.ಎಸ್.ಎಸ್. ತರಬೇತಿ ನೀಡಲಾಗುವುದು.

ಜಿಲ್ಲೆಯಲ್ಲಿ ಕನಿಷ್ಠ ಶೇ. 75% ರಷ್ಟು ಸ್ಥಾನಗಳು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಂದ ತುಂಬಲಾಗುವುದು.

ಸರ್ಕಾರದ ನಿಯಮದನ್ವಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ದಿವ್ಯಾಂಗ ವಿದ್ಯಾರ್ಥಿಗಳಿಗೆ  ಮೀಸಲಾತಿ ಇದೆ. ಕನಿಷ್ಠ 1/3 ರಷ್ಟು ಸ್ಥಾನಗಳು ಬಾಲಕಿಯರಿಗೆ ಮೀಸಲಾಗಿರುತ್ತವೆ.

ಆಯ್ಕೆ ಪರೀಕ್ಷೆ ದಿನಾಂಕ ಬೇಸಿಗೆಕಾಲ 2025 ನೇ ಡಿಸೆಂಬರ್ 13 ಹಾಗೂ ಚಳಿಗಾಲದಲ್ಲಿ 2026 ಏಪ್ರಿಲ್ 11 ರಂದು ಆಯ್ಕೆ ಪರೀಕ್ಷೆಗಳು ನಡೆಯುತ್ತವೆ ನೋಂದಣಿ ಮತ್ತು ವಿವರಗಳಿಗಾಗಿ ವೆಬ್‍ಸೈಟ್ https://navodava.gov.in ನ್ನು ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ವೀ ಕೇ ನ್ಯೂಸ್
";