ಕಾಲಕಾಲಕ್ಕೆ ಸರಿಯಾಗಿ ತೆರಿಗೆ ಪಾವತಿಸಲು ವಾಣಿಜ್ಯ ತೆರಿಗೆ ಇಲಾಖೆಯಿಂದ ವರ್ತಕರಿಗೆ ಸೂಚನೆ
ಮಾಧ್ಯಮಗಳಲ್ಲಿ ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ವರದಿಯಾಗಿದ್ದು, ಈ ಕುರಿತು ವಾಣಿಜ್ಯ ತೆರಿಗೆ ಇಲಾಖೆಯು ಈ ಕೆಳಕಂಡ ಮಾಹಿತಿಯನ್ನು ನೀಡಿರುತ್ತದೆ. ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯ ಕಲಂ 22 ರನ್ವಯ ಸರಕು ಪೂರೈಕೆದಾರರ...










