Live Stream

[ytplayer id=’22727′]

| Latest Version 8.0.1 |

State News

ದೇವನಹಳ್ಳಿ, ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರುಗಳ ಜೊತೆ ಚರ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ದೇವನಹಳ್ಳಿ, ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರುಗಳ ಜೊತೆ ಚರ್ಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ, ದೇವನಹಳ್ಳಿ, ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರುಗಳ ಜೊತೆ ಚರ್ಚೆ ನಡೆಸಿದರು.

ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರೆ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆ ವಿಷಯ ಕುರಿತಂತೆ ನಡೆಸಿದ ಸಭೆಯಲ್ಲಿ  ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವುದಕ್ಕೆ ಸಂಬಂಧಿಸಿದಂತೆ ಕೆಲವು ಕಾನೂನು ತೊಡಕುಗಳಿದ್ದು, ಅದನ್ನು ಸರಿಪಡಿಸಿಕೊಳ್ಳುವ ಸಲಹೆಯನ್ನು ಕಾನೂನು ತಜ್ಞರು ನೀಡಿದ್ದಾರೆ.
ಈಗಾಗಲೇ ಏಪ್ರಿಲ್ ತಿಂಗಳಲ್ಲಿ ಅಂತಿಮ ನೋಟಿಫಿಕೇಶನ್ ಅಗಿರುವ ಕಾರಣ ಅದರ ಸಾಧಕ ಬಾಧಕಗಳ ಕುರಿತು ಚರ್ಚೆ ನಡೆಸುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ 10 ದಿನಗಳ ಕಾಲಾವಕಾಶ ಅಗತ್ಯವಿದೆ. ಈ ಕಾಲಾವಧಿಯಲ್ಲಿ ಸರ್ಕಾರಕ್ಕೆ ಒಂದು ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಿದೆ ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಕಾನೂನು ಕಾಯ್ದೆಗೆ ವಿರುದ್ಧವಾಗಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳಲು ಸಾಧ್ಯವಿಲ್ಲ. ನಿಯಮಾನುಸಾರ ಅಂತಿಮ ನೋಟಿಫಿಕೇಶನ್ ಆಗಿರುವ ಕಾರಣ, ಅದರ ಕಾನೂನು ಅಂಶಗಳನ್ನು ಪರಿಶೀಲಿಸುವ ಅಗತ್ಯವಿದೆ. ಈ ಕುರಿತು ನಿನ್ನೆ ಪೂರ್ವಭಾವಿ ಸಭೆ ನಡೆಸಿದ್ದೇವೆ. ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ. 10 ದಿನಗಳ ಬಳಿಕ ಮತ್ತೆ ಸಭೆ ನಡೆಸಿ ಸರ್ಕಾರದ ನಿಲುವು ಸ್ಪಷ್ಟಪಡಿಸಲಾಗುವುದು ಎಂದರು.

ನಾವು ಪ್ರಜಾಪ್ರಭುತ್ವದಲ್ಲಿ ಮತ್ತು ಸಂವಾದದಲ್ಲಿ ನಂಬಿಕೆಯಿರುವವರು. ಪ್ರತಿಭಟನೆಗೆ ಯಾವುದೇ ಅಡ್ಡಿಪಡಿಸಿಲ್ಲ. ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಯತ್ನ ಸರ್ಕಾರ ಮಾಡಿಲ್ಲ. ನಾನೂ ರೈತ ಸಂಘದಲ್ಲಿದ್ದವನು ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಭೈರತಿ ಸುರೇಶ್, ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್.ಪಾಟೀಲ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೆÇನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಚಿತ್ರನಟ ಪ್ರಕಾಶ್ ರಾಜ್ ಸೇರಿದಂತೆ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";