ಬೆಂಗಳೂರು: ಬೆಂಗಳೂರು ಸುರಂಗ ರಸ್ತೆ ಯೋಜನೆ ಸಂಬಂಧ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಆಡಳಿತಾರೂಢ ಕಾಂಗ್ರೆಸ್ ನಡುವಿನ ವಾಕ್ಸಮರ ತೀವ್ರಗೊಂಡಿದೆ. ಬೆಂಗಳೂರು ಸುರಂಗ ರಸ್ತೆ ಯೋಜನೆ ವಿಚಾರವಾಗಿ ಈ ಹಿಂದೆ ಮಾತನಾಡಿದ್ದ ತೇಜಸ್ವಿ ಸೂರ್ಯ ಅವರು, ಯೋಜನೆಯಿಂದ ಬೆಂಗಳೂರಿಗೆ ಏನೂ ಉಪಯೋಗವಿಲ್ಲ, ಬ್ರಹ್ಮಾಂಡ ಭ್ರಷ್ಟಾಚಾರದಿಂದ ಕೂಡಿದೆ ಎಂದು ಆರೋಪಿಸಿದ್ದರು.
ಇದಕ್ಕೆ ತಿರುಗೇಟು ನೀಡಿದ್ದ ಕಾಂಗ್ರೆಸ್, ಯೋಜನೆ ಸಂಬಂಧಿತ ಪ್ರಮುಖ ಸಲಹೆ ಸೂಚನೆಗಳಿಗೆ ಸದಾ ಸ್ವಾಗತವಿದೆ. ಆದರೆ, ಬ್ರಾಂಡ್ ಬೆಂಗಳೂರಿನ ಈ ಮಹತ್ವಾಕಾಂಕ್ಷೆಯ ಯೋಜನೆಯನ್ನು ಕೇವಲ ರಾಜಕೀಯ ದೃಷ್ಟಿಯಿಂದ ನೋಡಬಾರದು ಎಂದು ಹೇಳಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ತೇಜಸ್ವಿ ಸೂರ್ಯ ಅವರು, ಯೋಜನೆ ಸಂಬಂಧ ಬಹಿರಂಗ ಚರ್ಚೆಗೆ ಬರುವಂತೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಅಭಿವೃದ್ಧಿ ಸಚಿವ ಡಿಕೆ.ಶಿವಕುಮಾರ್ ಅವರಿಗೆ ಸವಾಲು ಹಾಕಿದ್ದಾರೆ.