ಬೆಂಗಳೂರು: ನಗರದಲ್ಲಿ ಧಾರಾಕಾರ ಮಳೆಯಿಂದ (Terrific Rain) ಉಂಟಾಗಿರುವ ಅನಾಹುತಗಳ ವಿವಿಧ ಸ್ಥಳಗಳಿಗೆ ಶುಕ್ರವಾರ
ಖುದ್ದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ (Dr. Shalini Rajaneesh)ಭೇಟಿ ನೀಡಿ ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ತುರ್ತು ಕ್ರಮಗಳಿಗೆ (quick action) ಸೂಚನೆ ನೀಡಿದರು
ಸಿಲ್ಕ್ ಬೋರ್ಡ್ ಜಂಕ್ಷನ್‍ಗೆ ಭೇಟಿ ನೀಡಿದ ಅವರು, ಅಲ್ಲಿನ ಕೆಲ ಸ್ಥಳಗಳಲ್ಲಿ ಜಲಾವೃತವಾಗುವುದದನ್ನು ತಪ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.
ಸಿಲ್ಕ್ ಬೋರ್ಡ್ ನ ಮೇಲ್ಸೇತುವೆ ಕೆಳಭಾಗದ ಸುತ್ತಲೂ, ರಾಜಕಾಲುವೆಯಲ್ಲಿ ಸಂಪೂರ್ಣ ಸ್ವಚ್ಛತೆ ಕಾಪಾಡಬೇಕು. ಬಳಕೆಯಾಗದ ಜಾಗದಲ್ಲಿ ಡೆಬ್ರೀಸ್, ರಾಜಕಾಲುವೆಯಲ್ಲಿ ಹೂಳನ್ನು ಇಂದೇ ತೆರವುಗೊಳಿಸಿ ಸುಂದರೀಕರಣ ಮಾಡಿ, ಫೇವರ್ ಬ್ಲಾಕ್ಸ್ ಅಳವಡಿಸಬೇಕು ಎಂದು ತಿಳಿಸಿದರು.
ನಮ್ಮ ಮೆಟ್ರೋ ಸ್ಕೈವಾಕ್ ನಿರ್ಮಾಣ ಮಾಡಿ, 2026 ಜೂನ್ ಅಂತ್ಯಕ್ಕೆ ಮೆಟ್ರೋ ಕಾಮಗಾರಿ ಪೂರ್ಣಗೊಳಿಸುವುದು. ಪಾಲಿಕೆಯಿಂದ ಹೈ ರೈಸ್ ಪೆಡೆಸ್ಟ್ರಿಯನ್ ಕ್ರಾಸಿಂಗ್ ಮಾಡುವುದು. ರಾಜಕಾಲುವೆಯಲ್ಲಿ ಹೂಳೆತ್ತಿದ ತಕ್ಷಣ, ಹೂಳನ್ನು ಸ್ಥಳದಲ್ಲಿಯೇ ಬಿಡದೆ ತಕ್ಷಣ ತೆರವುಗೊಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಮೆಟ್ರೋ ಇಲಾಖೆಯಿಂದ 25 ಮೀ. ನಿಂದ 45 ಮೀಟರ್ ಗೆ ಮೇಲ್ಸೇತುವೆ ನಿರ್ಮಾಣ ಮಾಡಲಾಗುವುದು. ಕೆ.ಎ.ಎಲ್ ಕಾಲೋನಿಯಲ್ಲಿ ಅಳವಡಿಸಲು ಬೃಹತ್ ಪೈಪ್‍ಗಳನ್ನು ಜಂಕ್ಷನ್‍ನಲ್ಲಿ ಹಾಕಿದ್ದು, ಅದನ್ನು ಕೂಡಲೆ ತೆರವುಗೊಳಿಸಲು ಹಾಗೂ ಸಿಲ್ಕ್ ಬೋರ್ಡ್ ಮೆಟ್ರೋ ಇಲಾಖೆಯು ಕಾಮಗಾರಿ ನಡೆಯುವ ಸ್ಥಳದಲ್ಲಿ ಕಬ್ಬಣಿ, ಸ್ಕ್ರ್ಯಾಪ್ ರಸ್ತೆಯಲ್ಲೇ ಹಾಕಿದ್ದು, ಅದನ್ನು ಈ ಕೂಡಲೆ ತೆರವುಗೊಳಿಸಲು ಸೂಚನೆ ನೀಡಿದರು.
ಹೆಚ್.ಎಸ್.ಆರ್ 6ನೇ ಸೆಕ್ಟರ್ (ಮಂಗಮ್ಮನ ಪಾಳ್ಯ ಮುಖ್ಯ ರಸ್ತೆ ಬಳಿ) ಮೆಟ್ರೋ ಕಾಮಗಾರಿಯ ಮೀಡಿಯನ್ ಸರಿಯಾಗಿ ಅಳವಡಿಸದೇ ಇರುವುದು, ಅನುಪಯುಕ್ತ ಮೆಟಿರಿಯಲ್ ಅನ್ನು ಕೂಡಲೆ ತೆರವುಗೊಳಿಸಬೇಕು. ಜೊತೆಗೆ ರಸ್ತೆ ಬದಿ ಸ್ವಚ್ಛತೆ ಹಾಗೂ ಡಂಬರೀಕರಣ ಹಾಕಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮೆಟ್ರೋ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹೆಚ್.ಎಸ್.ಆರ್ 5ನೇ ಸೆಕ್ಟರ್ ರಸ್ತೆ ತಿರುವು ಬಳಿ ಪಾದಾಚರಿ, ಎಲೆಕ್ಟ್ರಿಕಲ್ ಕಂಬ, ಡ್ರೈನ್ ಅನ್ನು ಸರಿಯಾಗಿ ಮಾಡಿ ಸುಗಮ ವಾಹನಗಳ ಸಂಚಾರಕ್ಕೆ ಅನುವಾಗುವಂತೆ ಮಾಡುವುದು ಮತ್ತು ರಸ್ತೆ ಮೇಲೆ ನೀರು ನಿಲ್ಲುತ್ತದೆ, ಕೂಡಲೆ ಡ್ರೈನ್ ಕಾಮಗಾರಿ ನಡೆಸಿ ನೀರು ಸರಾಗವಾಗಿ ಹೋಗಲು ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದರು.
ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಂಡಿದ್ದು, ರಸ್ತೆಯನ್ನು ಸಂಪೂರ್ಣ ಸುಸ್ತಿತಿಯಲ್ಲಿಡಬೇಕು. ಕೂಡಲೆ ಡ್ರೈನೇಜ್ ಕೆಲಸ ಮುಗಿಸಬೇಕು. ಹಾಳಾಗಿರುವ ಕಡೆ ರಸ್ತೆ ಲೆವೆಲ್ ಮಾಡಿ ರೋಲ್ ಮಾಡಿ, ವೆಟ್ ಮಿಕ್ಸ್ ಹಾಕಿ ಮೋಟರೆಬಲ್ ಮಾಡಲು ತಿಳಿಸಿದರು.
ಸ್ಯಾನಿಟರಿ ಲೈನ್ ಬಳಿ ಸುರಕ್ಷಾ ಕ್ರಮಗಳನ್ನು ಕೈಗೊಳ್ಳುವುದು. ಫೆಬ್ರಬರಿಯಲ್ಲಿ ಕೆಲಸ ಪ್ರಾರಂಭವಾಗಿದ್ದು, ಕೆಲಸಕ್ಕೆ ಮಾತ್ರ ವೇಗ ನೀಡಲ್ಲ ಎಂದು ನಾಗರಿಕರು ದೂರಿದರು. ಈ ಸಂಬಂಧ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಮುಖ್ಯ ಕಾರ್ಯದರ್ಶಿಗಳು ದಕ್ಷಿಣ ನಗರ ಪಾಲಿಕೆಯ ಏನು ಕೆಲಸ ನಡೆಯುತ್ತಿದೆ, ಯಾರು ಗುತ್ತಿಗೆದಾರರು, ಯವಾಗ ಕೆಲಸ ಪ್ರಾರಂಭಿಸಲಾಗಿದೆ, ಯವಾಗ ಮುಗಿಯುತ್ತದೆ ಸಂಪೂರ್ಣ ಮಾಹಿತಿ ತಿಳಿಸಬೇಕು ಎಂದು ಸೂಚಿಸಿದರು.
ಅಗರ ಜಂಕ್ಷನ್ ಬಳಿ ಮೇಲ್ಸೇತುವೆಯ ಮೇಲೆ ಬೀಳುವ ನೀರಿಗೆ ಅಳವಡಿಸಿರುವ ಪೈಪ್ ಹಾಳಾಗಿದ್ದು, ರಸ್ತೆ ಮೇಲೆ ನೀರು ಬೀಳುತ್ತಿದೆ. ಈ ಸಂಬಂಧ ರಸ್ತೆ ಮೇಲೆ ನೀರು ಬೀಳದಂತೆ ಪೈಪ್ ಗಳನ್ನು ಅಳವಡಿಸಬೇಕು. ಮುಖ್ಯ ರಸ್ತೆಯನ್ನು ಮೆಟ್ರೋ, ಸರ್ವೀಸ್ ರಸ್ತೆಯನ್ನು ಪಾಲಿಕೆ ದುರಸ್ತಿ ಮಾಡಬೇಕಿದ್ದು, ಈ ಕ್ಷಣವೇ ರಸ್ತೆ ದುರಸ್ತಿ ಕಾರ್ಯ ಕೈಗೊಳ್ಳಲು ಮೆಟ್ರೋ ಅಧಿಕಾರಿಗೆ ಸೂಚನೆ ನೀಡಿದರು.
ಸರ್ಜಾಪುರ ಸರ್ವೀಸ್ ರಸ್ತೆಯನ್ನು ಆದ್ಯತೆ ಮೇರೆಗೆ ಅಭಿವೃದ್ಧಿಪಡಿಸಲು ದಕ್ಷಿಣ ಪಾಲಕೆ ಆಯುಕ್ತರಿಗೆ ಸೂಚಿಸಿದ ಮುಖ್ಯ ಕಾರ್ಯದರ್ಶಿಗಳು, ಇಬ್ಲೂರು ಜಂಕ್ಷನ್ ಬಳಿ ಪಾದಚಾರಿಗಳ ಸುಗಮ ಸಂಚಾರಕ್ಕೆ ಸ್ಕೈವಾಕ್ ನಿರ್ಮಾಣ ಮಾಡುವಂತೆ ತಿಳಿಸಿದರು.
ರಸ್ತೆಯಲ್ಲಿ ಜಲಾವೃತವಾಗದಂತೆ ಹಾಗೂ ಜಂಕ್ಷನ್ ನ ಸಮಗ್ರ ಅಭಿವೃದ್ಧಿ ಮಾಡಬೇಕು. ಪಾದಚಾರಿ ಮಾರ್ಗ ದುರಸ್ತಿ ಕಾರ್ಯ ನಡೆಸಿ, ಸ್ವಚ್ಛವಾಗಿಡಬೇಕು. ಇಬ್ಲೂರು ಜಂಕ್ಷನ್ ನಿಂದ ಮಾರತಹಳ್ಳಿಯವರೆಗೆ ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆ ವಿಲೀನ ಮಾಡಿದರೆ ಬಹಳಷ್ಟು ಸಂಚಾರ ದಟ್ಟಣೆ ಕಡಿಮೆ ಆಗಲಿದ್ದು, ಅದಕ್ಕೆ ಅಗತ್ಯ ಕ್ರಮವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.





















