ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಮೈಸೂರಿನ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಮೈಸೂರು : ಮೈಸೂರು ದಸರಾ ಉದ್ಘಾಟನೆಗೆ ಭಾನು ಮುಷ್ಕಾಕ ಅವರನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರವು ಭಕ್ತರಲ್ಲಿ ತೀವ್ರ ಅಸಮಾಧಾನವನ್ನುಂಟುಮಾಡಿದೆ ಎಂದು ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಮಡಿಲು ಸೇವಾ ಟ್ರಸ್ಟ್ ಮೈಸೂರ್ ನ ಶ್ರೀ. ನವೀನ್, ಹಿಂದೂ ಮುಖಂಡರಾದ ಶ್ರೀ. ಅಶೋಕ್, ಶ್ರೀ.ಮಂಜುನಾಥ್ ದೀಪಕ್ ,ಶ್ರೀ.ಹರೀಶ್, ಶ್ರೀ. ನಿತೀನ್ ಯಾದವ್ ಪುರೋಯಿತರಾದ ಶ್ರೀ. ಸಂತೋಷ್ , ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ರಾಘವೇಂದ್ರ, ಶ್ರೀ.ಪುಟ್ಟರಾಜಯ್ಯ, ಶ್ರೀ.ಯಶ್ ಪಾಲ್, ಶ್ರೀ. ಗೋಪಾಲಕೃಷ್ಣ, ಶ್ರೀ. ನಾಗರಾಜ್ ಮುಂತಾದವರು ಉಪಸ್ಥಿತರಿದ್ದರು.
ಮೈಸೂರು ದಸರಾ ಕೇವಲ ಸಾಂಸ್ಕೃತಿಕ ಹಬ್ಬವಲ್ಲ; ಅದು ಕರ್ನಾಟಕದ ಅತಿ ದೊಡ್ಡ ಧಾರ್ಮಿಕ ಹಾಗೂ ಪಾರಂಪರಿಕ ಹಬ್ಬ. ಒಂಬತ್ತು ದಿನಗಳ ನವರಾತ್ರಿ ವೇಳೆ ಕಾಳಿ, ಮಹಾಲಕ್ಷ್ಮಿ, ಸರಸ್ವತಿ ದೇವಿಯರ ಆರಾಧನೆ ನಡೆಯುತ್ತಿದ್ದು, 10ನೇ ದಿನ ದೇವಿ ಚಾಮುಂಡೇಶ್ವರಿ ಮಹಿಷಾಸುರನ ಸಂಹಾರ ಮಾಡಿ ವಿಜಯೋತ್ಸವವನ್ನು ಆಚರಿಸಲಾಗುತ್ತದೆ.
ಇಂತಹ ಪವಿತ್ರ ಹಬ್ಬದ ಉದ್ಘಾಟನೆಗೆ ಆಹ್ವಾನಿತ ಮುಖ್ಯ ಅತಿಥಿಯು ದೇವಿಯ ಮೇಲೆ ಶ್ರದ್ದೆ, ಮೂರ್ತಿ ಪೂಜೆಯ ಮೇಲೆ ಭಕ್ತಿ ಹಾಗೂ ನಾಡದೇವಿಯ ಮೇಲೆ ಗೌರವ ಹೊಂದಿರಬೇಕು. ಆದರೆ ಭಾನು ಮುಷ್ಕಾಕ ಅವರು ಹಿಂದಿನ ಭಾಷಣಗಳಲ್ಲಿ ನಾಡದೇವಿ ಭುವನೇಶ್ವರಿ ದೇವಿಯನ್ನು ನಂಬುವುದಿಲ್ಲವೆಂದು ಸ್ಪಷ್ಟವಾಗಿ ಹೇಳಿದ್ದು, ದತ್ತಪೀಠ ಹೋರಾಟದ ಸಂದರ್ಭದಲ್ಲೂ ಮುಸ್ಲಿಂ ಸಮುದಾಯದ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇಂತಹ ವ್ಯಕ್ತಿಯನ್ನು ದಸರಾ ಉದ್ಘಾಟನೆಗೆ ಆಹ್ವಾನಿಸುವುದು ಅನುಚಿತವಾಗಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆ.
ಕರ್ನಾಟಕವು ಸಂಸ್ಕೃತಿ, ಪರಂಪರೆ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುವ ಅಸಂಖ್ಯಾತ ಗಣ್ಯರನ್ನು ಹೊಂದಿದೆ. ಪ್ರಸಿದ್ಧ ಸಾಹಿತಿ ಡಾ. ಎಸ್. ಎಲ್. ಭೈರಪ್ಪ ಅವರು ಭಾರತದ ಅತ್ಯುನ್ನತ ಸಾಹಿತ್ಯ ಸಮ್ಮಾನಗಳ ಜೊತೆಗೆ ಪದ್ಮಭೂಷಣ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಅವರ ಸಾಹಿತ್ಯ ಮತ್ತು ದಾರ್ಶನಿಕ ಕೃತಿಗಳು ರಾಷ್ಟ್ರ ಮಟ್ಟದಲ್ಲಿ ಕೀರ್ತಿ ತಂದುಕೊಟ್ಟಿವೆ. ಇಂತಹ ಕೀರ್ತಿಶಾಲಿ ವ್ಯಕ್ತಿಯನ್ನು ಕಡೆಗಣಿಸಿ ವಿದೇಶಿ ಬೂಕರ್ ಪ್ರಶಸ್ತಿ ಪಡೆದವರನ್ನು ಆಹ್ವಾನಿಸುವುದು ಎಷ್ಟು ಸರಿಯೆಂದು ಪ್ರಶ್ನಿಸಲೇಬೇಕು.
ಬೇಡಿಕೆಗಳು :
ಕರ್ನಾಟಕದ ಕೋಟ್ಯಾಂತರ ಭಕ್ತರ ಪರವಾಗಿ, ನಾವು ಸರ್ಕಾರವನ್ನು ಭಾನು ಮುಷ್ಕಾಕರನ್ನು ಆಹ್ವಾನಿಸುವ ನಿರ್ಧಾರವನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಹಾಗೂ ಈ ಪವಿತ್ರ ಹಬ್ಬದ ಉದ್ಘಾಟನೆಗೆ ಡಾ. ಎಸ್. ಎಲ್. ಭೈರಪ್ಪ ಅವರಂತಹ ಗಣ್ಯರನ್ನು ಗೌರವಿಸುವಂತೆ ಆಗ್ರಹಿಸುತ್ತೇವೆ.
ಇದರಿಂದ ಮೈಸೂರು ಹಿಂದೂ ದಸರಾ ಹಬ್ಬದ ಪಾವಿತ್ರ್ಯ ಕಾಪಾಡಲ್ಪಡುವುದರೊಂದಿಗೆ ಸಮುದಾಯದ ಭಾವನೆಗಳಿಗೆ ನ್ಯಾಯ ಸಿಗುತ್ತದೆ. ನೀವು ಈ ಕುರಿತು ಕೂಡಲೇ ಮರುಪರಿಶೀಲಿಸಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಬೇಕೆಂದು ಈ ಮೂಲಕ ವಿನಂತಿಸುತ್ತೇವೆ.
ಶ್ರೀ. ಶರತ್ ಕುಮಾರ್
ಹಿಂದೂ ರಾಷ್ಟ್ರ ಸಮನ್ವಯ ಸಮಿತಿ,
ಸಂಪರ್ಕ : 9480567514