Live Stream

[ytplayer id=’22727′]

| Latest Version 8.0.1 |

Bengaluru Urban

ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಧರ್ಮಸ್ಥಳದ ಯಾತ್ರೆ

ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಧರ್ಮಸ್ಥಳದ ಯಾತ್ರೆ

ಬೆಂಗಳೂರು: ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಅಭಿಯಾನದ ಪ್ರಯುಕ್ತ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷರು ಮತ್ತು ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಸಿ.ಕೆ. ರಾಮಮೂರ್ತಿ ಅವರ ನೇತೃತ್ವದಲ್ಲಿ 25.08.2025ರ ಸೋಮವಾರ ಬೆಳಿಗ್ಗೆ 6.00 ಗಂಟೆಗೆ ಜಯನಗರದ ಮೈಯಾಸ್ ಹೋಟೆಲ್ ಬಳಿ ಇರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ತದನಂತರ ಬೆಳಿಗ್ಗೆ 7:30 ಗಂಟೆಗೆ
ನೈಸ್ ರಸ್ತೆ ಬಳಿಯ ಪಿ.ಇ.ಎಸ್. ವಿಶ್ವವಿದ್ಯಾನಿಲಯದ ರಿಂಗ್ ರೋಡ್ ಹತ್ತಿರ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಂಸದರಾದ ಶ್ರೀ ತೇಜಸ್ವಿ ಸೂರ್ಯ, ಶಾಸಕರಾದ ಶ್ರೀ ರವಿಸುಬ್ರಹ್ಮಣ್ಯ ಅವರು ಧರ್ಮದ ಉಳಿವಿಗಾಗಿ ಧರ್ಮ ಯುದ್ಧ ಧರ್ಮಸ್ಥಳದ ಯಾತ್ರೆಗೆ ಚಾಲನೆ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ವಿಜಯನಗರ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ರವೀಂದ್ರ, ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ಉಮೇಶ್ ಶೆಟ್ಟಿ, ಬಿಟಿಎಂ ವಿಧಾನಸಭಾ ಕ್ಷೇತ್ರದ ಮುಖಂಡರಾದ ಶ್ರೀ ಶ್ರೀಧರ್ ರೆಡ್ಡಿ ಮತ್ತು ಮುಖಂಡರುಗಳು
ಉಪಸ್ಥಿತರಿರಲಿದ್ದಾರೆ.

ವೀ ಕೇ ನ್ಯೂಸ್
";