Live Stream

[ytplayer id=’22727′]

| Latest Version 8.0.1 |

Bengaluru Urban

ಇ-ಚಲನ್‍ನಲ್ಲಿ ದಾಖಲಾಗಿರುವ ಪ್ರಕರಣಗಳ ಮೊತ್ತದಲ್ಲಿ ರಿಯಾಯಿತಿ ನೀಡಿ ಆದೇಶ

ಇ-ಚಲನ್‍ನಲ್ಲಿ ದಾಖಲಾಗಿರುವ ಪ್ರಕರಣಗಳ ಮೊತ್ತದಲ್ಲಿ ರಿಯಾಯಿತಿ ನೀಡಿ ಆದೇಶ

ಬೆಂಗಳೂರು, ಆಗಸ್ಟ್ 21, (ಕರ್ನಾಟಕ ವಾರ್ತೆ): ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು  2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ  ದಿನಾಂಕ: 03-03-2023ರ ಆದೇಶದಲ್ಲಿ  ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೆÇಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‍ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ :09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‍ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು.  ಮುಂದುವರೆದು ಸದರಿ ಅವಧಿಯು ಮುಕ್ತಾಯ ವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ  ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ  ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು  ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";