ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಗೊಂಡಿದೆ, ಈ ಹಿನ್ನೆಲೆ ನಮ್ಮ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷ ಮೊಹಮ್ಮದ್ ಸಲೀಂ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ನಿಷೇಧ ಮಾಡಿದರುವಂತೆ ಮನವಿ ಮಾಡಿದ್ದಾರೆ,
ಲಕ್ಷಾಂತರ ಮಂದಿ ವಿದ್ಯಾರ್ಥಿಗಳು, ನಿರುದ್ಯೋಗಿಗಳು, ಪೋಷಕರು ಹಾಗೂ ದಿನಗೂಲಿ ಕಾರ್ಮಿಕರು ಬೈಕ್ ಟ್ಯಾಕ್ಸಿ ಸೇವೆಯಿಂದ ದಿನನಿತ್ಯ ಹೊಟ್ಟೆ ಹೊರೆದುಕೊಳ್ಳುತ್ತಿದ್ದಾರೆ, ಇವು ನಮ್ಮ ಬಿಡುವಿನ ವೇಳೆಯ ಕೆಲಸವಾಗಿರದೇ ಮೂಲ ಉದ್ಯೋಗವೇ ಆಗಿದೆ, ಈ ರೀತಿ ಏಕಾಏಕಿ ನಿಷೇಧ ಮಾಡುವುದರಿಂದ ನಮ್ಮ ಕುಟುಂಬಗಳು ಬೀದಿಗೆ ಬೀಳುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ,
ಸುರಕ್ಷತೆ, ವಿಮೆ ನಿಯಮ ಹಾಗೂ ತರಬೇತಿ ನಿಯಮಗಳನ್ನು ಜಾರಿಗೆ ತಂದು ನಮ್ಮನ್ನು ಅಧಿಕೃತ ಉದ್ಯೋಗಿಗಳನ್ನಾಗಿ ಮಾಡುವ ಬದಲು ನಿಷೇಧಗೊಳಿಸುವುದು ಎಷ್ಟು ಸರಿ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಗಿಗ್ ಕಾರ್ಮಿಕರಾದ ನಮಗೆ ನೀವು ಚುನಾವಣೆಯ ಮುನ್ನ ನೀಡಿದ್ದ ಭರವಸೆಯನ್ನು ಮರೆತಿದ್ದೀರಿ ಎಂದು ಹೇಳಲಾಗಿದೆ,
Veekay News > National News > ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!
ನಮ್ಮ ಹೊಟ್ಟೆಯ ಮೇಲೆ ಹೊಡೆಯಬೇಡಿ ರಾಹುಲ್ ಗಾಂಧಿಗೆ ಅಸೋಸಿಯೇಷನ್ ಪತ್ರ!
ವೀ ಕೇ ನ್ಯೂಸ್16/06/2025
posted on
