Live Stream

[ytplayer id=’22727′]

| Latest Version 8.0.1 |

State News

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ಕರ್ನಾಟಕ ರಾಜ್ಯ ಮುಕ್ತ ವಿವಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಒಡಂಬಡಿಕೆ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ಕರ್ನಾಟಕ ರಾಜ್ಯ ಮುಕ್ತ ವಿವಿ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಒಡಂಬಡಿಕೆ

ಕರ್ನಾಟಕ ರಾಜ್ಯ ಸರ್ಕಾರದ 2025-26ರ ಆಯವ್ಯಯ ಭಾಷಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಉನ್ನತ ಶಿಕ್ಷಣ ವಂಚಿತ ಅಲ್ಪಸಂಖ್ಯಾತ ವರ್ಗದ (ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು, ಬುದ್ದಿಸ್ಟ್, ಜೈನರು ಮತ್ತು ಪಾರ್ಸಿಗಳು) ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬೆಂಗಳೂರಿನ ಹಜ್ ಭವನದಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿವಿ ಪ್ರಾದೇಶಿಕ ಕೇಂದ್ರ ಸ್ಥಾಪನೆ ಮತ್ತು ದೂರ ಶಿಕ್ಷಣದ ಮೂಲಕ ಉನ್ನತ ಶಿಕ್ಷಣ ಯೋಜನೆಯನ್ನು ಘೋಷಿಸಿದ್ದರು. ಈ ಯೋಜನೆಯ ಅನುಷ್ಠಾನಕ್ಕಾಗಿ 2025-26ನೇ ಆರ್ಥಿಕ ವರ್ಷದಲ್ಲಿ ರೂ. 5.05 ಕೋಟಿ ಮೊತ್ತದ ಅನುದಾನವನ್ನು ಬಿಡುಗಡೆ ಮಾಡಿದ್ದರು.

ಅಲ್ಪಸಂಖ್ಯಾತ ವರ್ಗದ ಉಚಿತ ಉನ್ನತ ಶಿಕ್ಷಣ ಯೋಜನೆಯ ಅನುಷ್ಠಾನ ಕಾರ್ಯಕ್ರಮವು ಇತ್ತೀಚೆಗೆ ಬೆಂಗಳೂರಿನ ವಸಂತ ನಗರದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮುಖ್ಯ ಆಡಳಿತ ಕಛೇರಿ ಆಜಾದ್ ಭವನದಲ್ಲಿ ಜರುಗಿತು. ಕರ್ನಾಟಕ ಸರ್ಕಾರದ ಸನ್ಮಾನ್ಯ ವಸತಿ ಸಚಿವರಾದ ಶ್ರೀ ಬಿ.ಜಡ್. ಜಮೀರ್ ಅಹ್ಮದ್ ಖಾನ್‌ರವರ ಸಮ್ಮುಖದಲ್ಲಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ನಿರ್ದೇಶಕರಾದ ಶ್ರೀ ಜಿಲಾನಿ ಹೆಚ್. ಮೊಕಾಶಿರವರು ಮತ್ತು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಸಚಿವರಾದ ಡಾ. ನವೀನ್ ಕುಮಾರ್ ರವರು ಪರಸ್ಪರ ತಿಳುವಳಿಕೆ ಒಡಂಬಡಿಕೆ ಪತ್ರಕ್ಕೆ ಸಹಿ ಮಾಡಿದರು. ಈ ಸಂದರ್ಭದಲ್ಲಿ ಕರಾಮುವಿಯ ಕುಲಪತಿಗಳಾದ ಪ್ರೊ. ಶರಣಪ್ಪ ವಿ. ಹಲಸೆ ರವರು ಮತ್ತು ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗಳಾದ ಶ್ರೀಮತಿ ಸಲ್ಮಾ ಫಾಹಿಮ್‌ರವರು ಹಾಗೂ ಕರಾಮುವಿ ಹಣಕಾಸು ಅಧಿಕಾರಿಗಳು, ಕುಲಸಚಿವರು (ಪರೀಕ್ಷಾಂಗ), ಡೀನ್ (ಶೈಕ್ಷಣಿಕ) ಮತ್ತು ಡೀನ್ (ಅಧ್ಯಯನ ಕೇಂದ್ರ) ಬೆಂಗಳೂರಿನ 07 ಮತ್ತು ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು ಪ್ರಾದೇಶಿಕ ಕೇಂದ್ರಗಳ ಪ್ರಾದೇಶಿಕ ನಿರ್ದೇಶಕರುಗಳು, ಅಧಿಕಾರಿ ವರ್ಗ, ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಅಧಿಕಾರಿ ವರ್ಗ ಸಿಬ್ಬಂದಿಗಳು ಹಾಜರಿದ್ದರು.

ಈ ಒಡಂಬಡಿಕೆ ಪ್ರಕಾರ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಕೋರ್ಸುಗಳಿಗೆ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಅರ್ಹ ವಿದ್ಯಾರ್ಥಿಗಳ ಶೈಕ್ಷಣಿಕ ಕೋರ್ಸುಗಳ ಪ್ರವೇಶಾತಿ ಮತ್ತು ಪರೀಕ್ಷಾ ಶುಲ್ಕವನ್ನು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯು ಕರಾಮುವಿಗೆ ನೇರವಾಗಿ ಪಾವತಿಸುತ್ತದೆ. ಇದರಿಂದ ಆರ್ಥಿಕವಾಗಿ ಹಿಂದುಳಿದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಉಚಿತವಾಗಿ ಉನ್ನತ ಶಿಕ್ಷಣ ಒದಗಿಸಿ ಉತ್ತಮ ಬದುಕು ರೂಪಿಸಿಕೊಳ್ಳಲು ಅನುಕೂಲ ಮಾಡಿದೆ. ಆದ್ದರಿಂದ ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಈ ಯೋಜನೆಯನ್ನು ಜಾರಿಗೊಳಿಸಿ ಅನುದಾನ ಬಿಡುಗಡೆ ಮಾಡಿರುವ ಗೌರವಾನ್ವಿತ ಸನ್ಮಾನ್ಯ ಮುಖ್ಯಮಂತ್ರಿಗಳಿಗೆ ವಸತಿ ಸಚಿವರು ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸಿ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳುವಂತೆ ಕರೆ ನೀಡಿದರು. ಎಂದು ಕರಾಮುವಿ ಬೆಂಗಳೂರು ಪ್ರಾದೇಶಿಕ ಕೇಂದ್ರ-01ರ ನಿರ್ದೇಶಕರಾದ ಶ್ರೀ ರೋಹಿತ್ ಹೆಚ್.ಎಸ್. ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಖೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲಯಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-2660 3664 ಹಾಗೂ 98806-26439/90195-26439 ಅನ್ನು ಸಂಪರ್ಕಿಸಬಹುದಾಗಿದೆ.

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";