Live Stream

[ytplayer id=’22727′]

| Latest Version 8.0.1 |

State News

ಉಪ ರಾಷ್ಟ್ರಪತಿ ಜಗದೀಪ್‌ ಧನಕರ್ ರನ್ನು ಬೀಳ್ಕೊಟ್ಟ ರಾಜ್ಯಪಾಲರು

ಉಪ ರಾಷ್ಟ್ರಪತಿ ಜಗದೀಪ್‌ ಧನಕರ್ ರನ್ನು ಬೀಳ್ಕೊಟ್ಟ ರಾಜ್ಯಪಾಲರು
ಬೆಂಗಳೂರು, ಜೂ. 8 :ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ನಿನ್ನೆ ಜೂನ್ 07 ರಂದು  ಬೆಂಗಳೂರಿಗೆ ಆಗಮಿಸಿದ್ದ ಗೌರವಾನ್ವಿತ  ಉಪ ರಾಷ್ಟ್ರಪತಿಗಳಾದ ಜಗದೀಪ್‌ ಧನಕರ್ ಅವರನ್ನು ಇಂದು ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಲ್ಲಿ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು  ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಮಯದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ವೀರಯ್ಯ, ಸರ್ಕಾರದ  ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ, ‌ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್,‌ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಸತ್ಯವತಿ ಜಿ ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ. ಉಪಸ್ಥಿತರಿದ್ದರು.

ವೀ ಕೇ ನ್ಯೂಸ್
";