ನವದೆಹಲಿ : ಉತ್ತರ ಕರ್ನಾಟಕದ ಅದರಲ್ಲಿಯೂ ವಿಶೇಷವಾಗಿ ಹುಬ್ಬಳ್ಳಿ-ಧಾರವಾಡ ಕೈಗಾರಿಕೋದ್ಯಮಿಗಳಿಗೆ ಒಂದು ಸಂತಸದ ಮತ್ತು ಹೆಮ್ಮೆಯ ವಿಷಯ.
ಧಾರವಾಡದ ಇಟ್ಟಿಗಟ್ಟಿಯಲ್ಲಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SಇZ) ವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಅಧಿಕೃತವಾಗಿ ಗೆಜೆಟ್‌ನಲ್ಲಿ ಪ್ರಕಟಿಸಿದೆ. ಈ ಭಾಗದಲ್ಲಿ ಎಲೆಕ್ಟ್ರಾನಿಕ್ಸ್ ಘಟಕಗಳ ಅವಶ್ಯಕತೆ ಮನಗಂಡು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಶ ಗೋಯಲ್ ಅವರಿಗೆ ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರು ವಿನಂತಿಸಿದ್ದರು.
ಜೋಶಿಯವರ ವಿನಂತಿಯ ಮೇರೆಗೆ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಶ ಗೋಯಲ್ ಘೊಷಿಸಿದ್ದಾರೆ.
ಒಟ್ಟು ೩೯೧ ಎಕರೆ ಭೂಮಿಯನ್ನು ಹೊಂದಿರುವ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್‌ನಲ್ಲಿ ಈಗ ೨೮ ಎಕರೆ ಭೂಮಿಯನ್ನು ಎಲೆಕ್ಟ್ರಾನಿಕ್ಸ್ ವಿಶೇಷ ಆರ್ಥಿಕ ವಲಯ ಎಂದು ಘೋಷಿಸಲಾಗಿದ್ದು ಬರುವ ದಿನಗಳಲ್ಲಿ ಹೊಸ ಎಲೆಕ್ಟ್ರಾನಿಕ್ಸ್ ಉದ್ಯಮಗಳು ಬರುವಂತೆ ವಿಶೇಷ ಆರ್ಥಿಕ ವಲಯದ ವಿಸ್ತರಣೆ ಮಾಡುವ ಅವಕಾಶವಿದೆ.
ನಮ್ಮ ಹುಬ್ಬಳ್ಳಿ -ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ. ಇದು ಹುಬ್ಬಳ್ಳಿಯನ್ನು ಎಲೆಕ್ಟ್ರಾನಿಕ್ಸ್ ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯ ಶಕ್ತಿಕೇಂದ್ರವಾಗಿ ಪರಿವರ್ತಿಸುವ ನಿರ್ಣಾಯಕ ಹೆಜ್ಜೆಯಾಗಲಿದೆ. ಹುಬ್ಬಳ್ಳಿ- ಧಾರವಾಡವು ತನ್ನ ಕಾರ್ಯತಂತ್ರದ ಸ್ಥಳ ಮತ್ತು ಕೌಶಲ್ಯಪೂರ್ಣ ಕಾರ್ಮಿಕರ ತಂಡದೊAದಿಗೆ ತ್ವರಿತ ಕೈಗಾರಿಕಾ ಬೆಳವಣಿಗೆ, ಗುಣಮಟ್ಟದ ಉದ್ಯೋಗ ಸೃಷ್ಟಿ ಮತ್ತು ಆರ್ಥಿಕ ಪ್ರಗತಿಗೆ ಸಿದ್ಧವಾಗಿದೆ.
ಸಚಿವ ಪ್ರಲ್ಹಾದ ಜೋಶಿ ಅವರ ಮನವಿಗೆ ಸ್ಪಂದಿಸಿ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್ ಪ್ರೈವೇಟ್ ಲಿಮಿಟೆಡ್ ಪ್ರಸ್ತಾಪಿಸಿದ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (SಇZ) ವನ್ನಾಗಿ ಘೋಷಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಶ ಗೋಯಲ್ ಅವರಿಗೆ ಹಾಗೂ ಕರ್ನಾಟಕ ಸರ್ಕಾರದ ವಾಣಿಜ್ಯ, ಕೈಗಾರಿಕೆ ಮತ್ತು ಮೂಲಸೌಕರ್ಯದ ಮಾನ್ಯ ಸಚಿವರಾದ ಶ್ರೀ ಎಂ. ಬಿ. ಪಾಟೀಲ ಅವರಿಗೆ ಧ್ಯನವಾದಗಳನ್ನು ಹೇಳಿರುವ ಸಚಿವ ಜೋಶಿ, ಈ ಸಂದರ್ಭದಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯವನ್ನು ಪಡೆದ ಏಕಸ್ ಇನ್ಫ್ರಾದ ಆಡಳಿತ ಮಂಡಳಿಗೆ ಅವರ ದೂರದೃಷ್ಟಿ ಮತ್ತು ಬದ್ಧತೆಗಾಗಿ ಹಾರ್ದಿಕ ಅಭಿನಂದನೆಗಳನ್ನೂ ಸಚಿವ ಜೋಶಿ ಅವರು ತಿಳಿಸಿದ್ದಾರೆ.