Live Stream

[ytplayer id=’22727′]

| Latest Version 8.0.1 |

Education News

ಕರ್ನಾಟಕ ರಾಜ್ಯ ಮುಕ್ತ ವಿ.ವಿ. ಪ್ರವೇಶಾತಿ ಪ್ರಾರಂಭ

ಬೆಂಗಳೂರು, ಜೂನ್ 30, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ರ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸ್ನಾತಕ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ., ಬಿ.ಲಿಬ್.ಐ. ಎಸ್ಸಿ ಮತ್ತು ಸ್ನಾತಕೋತ್ತರ ಕೋರ್ಸುಗಳಾದ ಎಂ.ಎ., ಎಂ.ಕಾಂ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ., ಎಂ.ಎಸ್ಸಿ., ಎಂ.ಲಿಬ್.ಐ. ಎಸ್ಸಿ. ಹಾಗೂ ಯುಜಿ/ PG Diploma ಮತ್ತು ಸರ್ಟಿಫಿಕೇಟ್ ಶಿಕ್ಷಣ ಕ್ರಮಗಳಿಗೆ 2025 ರ ಜುಲೈ 1 ರಿಂದ ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಬಾಪೂಜಿನಗರ ಇಲ್ಲಿ ಆನ್ ಲೈನ್ ಮೂಲಕ ಪ್ರವೇಶಾತಿಯನ್ನು ಪ್ರಾರಂಭಿಸಲಾಗಿದ್ದು, ವಿಶ್ವವಿದ್ಯಾನಿಲಯದ ಅಧಿಕೃತ ವೆಬ್ ಸೈಟ್  www.ksoumysuru.ac.in  ದಲ್ಲಿ ಲಭ್ಯವಿರುವ ವಿವರಣಾ ಪುಸ್ತಕದಲ್ಲಿ ಎಲ್ಲಾ ವಿವರಗಳನ್ನು ನೀಡಲಾಗಿದೆ.

ವಿದ್ಯಾರ್ಥಿಗಳು ಅದರನ್ವಯ ಅರ್ಹ ಶಿಕ್ಷಣ ಕ್ರಮಗಳಿಗೆ Online Admission Portal ಮೂಲಕ ಅಥವಾ ಖುದ್ದು ಅಗತ್ಯ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿದರೆ ಪ್ರವೇಶಾತಿ ಪೂರ್ಣ ಪ್ರಕ್ರಿಯೆಯನ್ನು ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಗಳು ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿ ಅಥವಾ ದಾಖಲಾತಿಗಳೊಂದಿಗೆ ಪ್ರಾದೇಶಿಕ ಕೇಂದ್ರಕ್ಕೆ ಭೇಟಿ ನೀಡಿ ಪ್ರವೇಶಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳಬೇಕು.

ಹೆಚ್ಚಿನ ವಿವರಗಳಿಗೆ ಪ್ರಾದೇಶಿಕ ನಿರ್ದೇಶಕರು, ಬೆಂಗಳೂರು ಪ್ರಾದೇಶಿಕ ಕೇಂದ್ರ-01, ಮೊದಲನೇ ಮಹಡಿ, ಕೆ.ಎಸ್.ಆರ್.ಟಿ.ಸಿ. ಸ್ಯಾಟಲೈಟ್ ಬಸ್ ನಿಲ್ದಾಣ, ಮೈಸೂರು ರಸ್ತೆ, ಬಾಪೂಜಿನಗರ, ಬೆಂಗಳೂರು-26, ಕಛೇರಿ ದೂರವಾಣಿ ಸಂಖ್ಯೆ: 080-26603664 ಹಾಗೂ 98805-26439 / 90195-26439 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಾದೇಶಿಕ ನಿರ್ದೇಶಕರಾದ ರೋಹಿತ್ ಹೆಚ್.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -  - Advertisement - 
ವೀ ಕೇ ನ್ಯೂಸ್
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";