Live Stream

[ytplayer id=’22727′]

| Latest Version 8.0.1 |

Feature ArticleState News

ಬೆಂಗಳೂರಲ್ಲಿ ಮತ್ತೆ ಲಾರಿ ಮುಷ್ಕರ

ಬೆಂಗಳೂರಲ್ಲಿ ಮತ್ತೆ ಲಾರಿ ಮುಷ್ಕರ
ಬೆಂಗಳೂರು: ಕರ್ನಾಟಕ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಮ್ಮೆ ಲಾರಿ ಮುಷ್ಕರದ ಕಾವು ಜೋರಾಗಿದೆ. ಕರ್ನಾಟಕ ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಣಿಕೆ ಗುತ್ತಿಗೆದಾರ ಸಂಘವು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಜುಲೈ 7ರಿಂದ ಬೆಳಗ್ಗೆ 9 ಗಂಟೆಯಿಂದ ಲಾರಿ ಮುಷ್ಕರಕ್ಕೆ ಕರೆ ನೀಡಿದೆ. ಈ ಮುಷ್ಕರದಿಂದ ರಾಜ್ಯದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಅನ್ನಭಾಗ್ಯ ಯೋಜನೆಯ ಅಕ್ಕಿ ಸರಬರಾಜಿನ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಕಳೆದ ಐದು ತಿಂಗಳಿಂದ ಸರ್ಕಾರವು ಅನ್ನಭಾಗ್ಯ ಯೋಜನೆಯ ಅಕ್ಕಿ ಸಾಗಾಣಿಕೆಗೆ ಸಂಬಂಧಿಸಿದಂತೆ ಸುಮಾರು 250 ಕೋಟಿ ರೂಪಾಯಿಗಳ ಬಾಕಿ ಹಣವನ್ನು ಬಿಡುಗಡೆ ಮಾಡದಿರುವುದೇ ಈ ಪ್ರತಿಭಟನೆಗೆ ಮುಖ್ಯ ಕಾರಣವಾಗಿದೆ. ಫೆಬ್ರವರಿಯಿಂದ ಮೇ ತಿಂಗಾಳವರೆಗಿನ ಸಾಗಾಣಿಕೆ ವೆಚ್ಚವನ್ನು ಸರ್ಕಾರ ಇನ್ನೂ ಪಾವತಿಸಿಲ್ಲ ಎಂದು ಸಂಘಟನೆ ಆರೋಪಿಸಿದೆ. ಐದು ತಿಂಗಳಾದರೂ ಬಾಕಿ ಮೊತ್ತ ಬಿಡುಗಡೆಯಾಗಿಲ್ಲ. ಇದರಿಂದ ಸಾಗಾಣಿಕೆದಾರರಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ,” ಎಂದು ಸಂಘದ ಮುಖಂಡರು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆಯು ಕರ್ನಾಟಕ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಲಕ್ಷಾಂತರ ಕುಟುಂಬಗಳಿಗೆ ಉಚಿತವಾಗಿ ಅಕ್ಕಿಯನ್ನು ಒದಗಿಸುತ್ತದೆ. ಆದರೆ, ಈಗ ಈ ಯೋಜನೆಯ ಅನುಷ್ಠಾನಕ್ಕೆ ಲಾರಿ ಮುಷ್ಕರದಿಂದ ತೀವ್ರ ತೊಂದರೆಯಾಗುವ ಸಾಧ್ಯತೆ ಇದೆ. “ನಾವು ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯುವುದಿಲ್ಲ. ನಮ್ಮ ಕೆಲಸಕ್ಕೆ ಸರಿಯಾದ ಸಂಭಾವನೆಯನ್ನು ಸರ್ಕಾರ ನೀಡಬೇಕು. ಈ ಮುಷ್ಕರದಿಂದ ಸಾಮಾನ್ಯ ಜನರಿಗೆ ಆಹಾರ ಧಾನ್ಯಗಳ ಲಭ್ಯತೆಯ ಮೇಲೆ ಪರಿಣಾಮ ಬೀರಬಹುದು. ವಿಶೇಷವಾಗಿ, ಗ್ರಾಮೀಣ ಪ್ರದೇಶಗಳಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಅಕ್ಕಿಯ ಕೊರತೆ ಎದುರಾಗಬಹುದು. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಸರಬರಾಜು ವಿಳಂಬದಿಂದ ತೊಂದರೆಯಾಗಿರುವ ಬಗ್ಗೆ ವರದಿಗಳಿವೆ.
ವೀ ಕೇ ನ್ಯೂಸ್
";