ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದ ನಿಯೋಗವು (BJP delegation) ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ (Maddur Clashes) ಗಣೇಶ ವಿಸರ್ಜನೆ ಸಂದರ್ಭದಲ್ಲಿ (Ganesha Visarjana) ಇತ್ತೀಚೆಗೆ ನಡೆದ ಕಲ್ಲು ತೂರಾಟದ (Stone Pelting) ಕುರಿತು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಅವರೊಂದಿಗೆ ಚರ್ಚೆ ನಡೆಸಿ, ಪ್ರಕರಣದ ಕುರಿತು ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ಸಂಸದರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವರಾದ ಶ್ರೀ ಸಿ. ಟಿ. ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರೀತಮ್ ಗೌಡ, ಶಾಸಕರು ಮತ್ತು ಪ್ರಮುಖರು ಉಪಸ್ಥಿತರಿದ್ದರು.